ಜನ ಮನದ ನಾಡಿ ಮಿಡಿತ

Advertisement

ಉಡುಪಿ : ಎ.30ರಂದು ಶ್ರೀಕೃಷ್ಣನಿಗೆ ಸುವರ್ಣ ತುಲಾಭಾರ ಸೇವೆ

ಪರ್ಯಾಯ ಶ್ರೀ ಪುತ್ತಿಗೆ ಮಠದ ಆಶ್ರಯದಲ್ಲಿ ಅಕ್ಷಯ ತೃತೀಯಾ ಪರ್ವದಿನವಾದ ಎ. 30 ರಂದು ಸಂಜೆ 4ಕ್ಕೆ ಶ್ರೀಕೃಷ್ಣ ಮಠದ ವಸಂತ ಮಹಲ್ ಮಧ್ವ ಮಂಟಪದಲ್ಲಿ ಶ್ರೀಕೃಷ್ಣನಿಗೆ ಸುವರ್ಣ ತುಲಾಭಾರ ನಡೆಯಲಿದೆ ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಿಳಿಸಿದ್ದಾರೆ.

ಉಡುಪಿ ಕೃಷ್ಣ ಮಠದ ಗೀತಾಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಲಾಭಾರ ಸ್ಥಳದಲ್ಲಿ ಚಿನ್ನ ಖರೀದಿಸಿ ನೇರ ಸಮರ್ಪಿಸಲು ಹಾಗೂ ಹಳೇ ಚಿನ್ನ ನೀಡಲು ಅವಕಾಶವಿದೆ. ಜತೆಗೆ ಶ್ರೀಕೃಷ್ಣನ ಮೂಲ ವಿಗ್ರಹಕ್ಕೆ ಕನಕಾಭಿಷೇಕ ಮಾಡಿದ ಸುವರ್ಣ ಪ್ರಸಾದ ಪಡೆಯಬಹುದು. ಕೃಷ್ಣ ತುಲಾಭಾರಕ್ಕೆ ಬಳಸಿದ ಚಿನ್ನವನ್ನು ನೂತನ ಪಾರ್ಥಸಾರಥಿ ಸುವರ್ಣ ರಥಕ್ಕೆ ಉಪಯೋಗಿಸಲಾಗುವುದು. ಪಾರ್ಥಸಾರಥಿ ರಥವು ಸುಮಾರು 18 ಕೋ.ರೂ. ವೆಚ್ಚದಲ್ಲಿ ಸಿದ್ಧವಾಗಲಿದೆ. ಭಕ್ತರು ತಮ್ಮ ಸೇವೆಯನ್ನು ಆನ್‌ಲೈನ್ ಮೂಲಕವೂ ಬುಕ್ ಮಾಡಬಹುದು. ಅಂಚೆ ಮೂಲಕವೂ ಪ್ರಸಾದ ಪಡೆಯಬಹುದು ಎಂದು ಅವರು ತಿಳಿಸಿದರು.

ಮಠದ ದಿವಾನ ನಾಗರಾಜ ಆಚಾರ್ಯ, ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ರಮೇಶ್ ಭಟ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!