ಪರ್ಯಾಯ ಶ್ರೀ ಪುತ್ತಿಗೆ ಮಠದ ಆಶ್ರಯದಲ್ಲಿ ಅಕ್ಷಯ ತೃತೀಯಾ ಪರ್ವದಿನವಾದ ಎ. 30 ರಂದು ಸಂಜೆ 4ಕ್ಕೆ ಶ್ರೀಕೃಷ್ಣ ಮಠದ ವಸಂತ ಮಹಲ್ ಮಧ್ವ ಮಂಟಪದಲ್ಲಿ ಶ್ರೀಕೃಷ್ಣನಿಗೆ ಸುವರ್ಣ ತುಲಾಭಾರ ನಡೆಯಲಿದೆ ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಿಳಿಸಿದ್ದಾರೆ.
ಉಡುಪಿ ಕೃಷ್ಣ ಮಠದ ಗೀತಾಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಲಾಭಾರ ಸ್ಥಳದಲ್ಲಿ ಚಿನ್ನ ಖರೀದಿಸಿ ನೇರ ಸಮರ್ಪಿಸಲು ಹಾಗೂ ಹಳೇ ಚಿನ್ನ ನೀಡಲು ಅವಕಾಶವಿದೆ. ಜತೆಗೆ ಶ್ರೀಕೃಷ್ಣನ ಮೂಲ ವಿಗ್ರಹಕ್ಕೆ ಕನಕಾಭಿಷೇಕ ಮಾಡಿದ ಸುವರ್ಣ ಪ್ರಸಾದ ಪಡೆಯಬಹುದು. ಕೃಷ್ಣ ತುಲಾಭಾರಕ್ಕೆ ಬಳಸಿದ ಚಿನ್ನವನ್ನು ನೂತನ ಪಾರ್ಥಸಾರಥಿ ಸುವರ್ಣ ರಥಕ್ಕೆ ಉಪಯೋಗಿಸಲಾಗುವುದು. ಪಾರ್ಥಸಾರಥಿ ರಥವು ಸುಮಾರು 18 ಕೋ.ರೂ. ವೆಚ್ಚದಲ್ಲಿ ಸಿದ್ಧವಾಗಲಿದೆ. ಭಕ್ತರು ತಮ್ಮ ಸೇವೆಯನ್ನು ಆನ್‌ಲೈನ್ ಮೂಲಕವೂ ಬುಕ್ ಮಾಡಬಹುದು. ಅಂಚೆ ಮೂಲಕವೂ ಪ್ರಸಾದ ಪಡೆಯಬಹುದು ಎಂದು ಅವರು ತಿಳಿಸಿದರು.
ಮಠದ ದಿವಾನ ನಾಗರಾಜ ಆಚಾರ್ಯ, ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ರಮೇಶ್ ಭಟ್ ಉಪಸ್ಥಿತರಿದ್ದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್‌ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…