ಮಂಗಳೂರಿನ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮರವೂರು ರೈಲ್ವೆ ಸೇತುವೆಯ ಬಳಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದ ಗಣಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 150 ಮೆಟ್ರಿಕ್ ಟನ್ ಮರಳು, ಡೋಜರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ತಮಿಳುನಾಡು-ಕೇರಳ-ಮಂಗಳೂರಿನಿಂದ ಮರವೂರು ರೈಲ್ವೆ ಸೇತುವೆ ಮೂಲಕ ಕೊಂಕಣ ರೈಲು ಮಾರ್ಗದಲ್ಲಿ ಪ್ರತಿನಿತ್ಯ 50 ರೈಲುಗಳಲ್ಲಿ 40 ಸಾವಿರದಿಂದ 50 ಸಾವಿರ ಪ್ರಯಾಣಿಕರು ಪ್ರಯಾಣಿಸು ತ್ತಿದ್ದು, ಈ ರೈಲ್ವೆ ಟ್ರ್ಯಾಕ್‌ನ ಕೆಳಭಾಗದಲ್ಲೇ ನಿಯಮ ಮೀರಿ ಅಕ್ರಮ ಮರಳುಗಾರಿಕೆ ನಡೆಸಲಾಗುತ್ತಿತ್ತು ಎನ್ನಲಾಗಿದೆ.
ಗಣಿ ಮತ್ತು ಭೂವಿಜ್ಞಾನ ಇಲಾಖೆ ನಿಯಮದ ಪ್ರಕಾರ ಸೇತುವೆಯ ಎರಡೂ ಭಾಗದ ತಲಾ 100 ಮೀ. ವ್ಯಾಪ್ತಿಯಲ್ಲಿ ಮರಳುಗಾರಿಕೆ ನಡೆಸುವಂತಿಲ್ಲ. ಆದರೆ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ ಎಂ.ಸಿ. ಕೃಷ್ಣವೇಣಿ ಮಾರ್ಗದರ್ಶನದಂತೆ ಗಣಿ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ವರ್ಗವು ದಾಳಿ ನಡೆಸಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್‌ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…