ಜೈಪುರ: ಬಿಹಾರದ 14 ವರ್ಷದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಅವರ ನಿರ್ಭೀತ ಬ್ಯಾಟಿಂಗ್‌ಗೆ ಇಡೀ ಕ್ರೀಡಾ ಜಗತ್ತೇ ಮನ ಸೋತಿದೆ. ಕ್ರಿಕೆಟ್ ದೇವರು ಎಂದೇ ಕರೆಸಿಕೊಳ್ಳುವ ದಿಗ್ಗಜ ಆಟಗಾರ ಸಚಿನ್ ತೆಂಡೂಲ್ಕರ್ ಕೂಡ ಸೂರ್ಯವಂಶಿ ಬ್ಯಾಟಿಂಗ್‌ಗೆ ಮನಸೋತಿದ್ದಾರೆ. ‘ವೈಭವ್ ನಿರ್ಭಿತ ಬ್ಯಾಟಿಂಗ್ ಶೈಲಿ, ಬ್ಯಾಟ್ ಸ್ಪೀಡ್, ಲೆಂಗ್ತ್ ಆರಿಸಿಕೊಳ್ಳುವ ರೀತಿ ನೋಡುವುದೇ ಕಣ್ಣಿಗೆ ಹಬ್ಬ’ ಎಂದು ಮೆಚ್ಚುಗೆ ಸೂಚಿಸಿದ್ದಾರೆ.
ಕಳೆದ ವರ್ಷ ನಡೆದಿದ್ದ ಐಪಿಎಲ್ ಮೆಗಾ ಹರಾಜಿನಲ್ಲಿ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯು ಬರೋಬ್ಬರಿ 1.1 ಕೋಟಿ ರೂ. ನೀಡಿ ವೈಭವ್ ಸೂರ್ಯವಂಶಿ ಅವರನ್ನು ಖರೀದಿಸಿತ್ತು. ಆಗ ಅವರಿಗೆ 13 ವರ್ಷ ವಯಸ್ಸಾಗಿತ್ತು. ಹರಾಜಿನಲ್ಲೇ ಕ್ರಿಕೆಟ್ ಪ್ರೇಮಿಗಳ ಹುಬ್ಬೇರಿಸುವಂತೆ ಮಾಡಿದ್ದ ಈ ಪೋರ ಅತಿ ವೇಗದ ಶತಕ ಬಾರಿಸುವ ಮೂಲಕ ಸಂಚಲನ ಮೂಡಿಸಿದ್ದಾನೆ.
ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದ ವೈಭವ್, ತಾವಾಡಿದ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸಿ ತಾವೊಬ್ಬ ಅಪಾಯಕಾರಿ ಬ್ಯಾಟರ್ ಎನ್ನುವ ಸೂಚನೆ ನೀಡಿದ್ದರು. ಇದನ್ನೂ ಸಾಧಿಸಿಯೂ ತೋರಿಸಿದ್ದಾರೆ. ತಮ್ಮ ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ ವಿಶ್ವದರ್ಜೆಯ ಬೌಲರ್‌ಗಳಿಗೂ ಚಳಿ ಬಿಡಿಸಿದ್ದಾರೆ. ಅದರಲ್ಲೂ ಸಿಕ್ಸರ್ ಮೂಲಕವೇ ಶತಕ ಬಾರಿಸಿದ್ದು ಅವರ ರನ್ ದಾಹ ಎಷ್ಟರ ಮಟ್ಟಿಗೆ ಇದೆ ಎನ್ನುವುದು ಸಾಭೀತಾಗಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್‌ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…