ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೆಲವು ದಿನಗಳ ಹಿಂದಷ್ಟೇ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರು ಕಂಡಿದ್ದು ಅವರು ಆಸ್ಪತ್ರೆ ಸೇರಿ ಬಳಿಕ ಗುಣಮುಖರಾಗಿದ್ದರು. ಆದರೆ ಈಗ ಇದರ ಬೆನ್ನಲ್ಲೇ ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಕಫದ ಸಮಸ್ಯೆಯಿಂದ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಬಳಲುತ್ತಿದ್ದು, ಇದೀಗ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಕುಮಾರಸ್ವಾಮಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ 4 ದಿನಗಳಿಂದ ಎಚ್ ಡಿ ಕುಮಾರಸ್ವಾಮಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ ಚಿಕಿತ್ಸೆ ಪಡೆಯಲು ವಿದೇಶಕ್ಕೂ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.



