ಮಂಗಳೂರಿನ ಪಾಂಡೇಶ್ವರದಲ್ಲಿರುವ ಕೊಚ್ಚಿನ್ ಬೇಕರಿಯಲ್ಲಿ ಮಂಗಳವಾರ ಬೆಳಗಿನ ಜಾವ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.

ಬೇಕರಿಯನ್ನು ಸಂಪೂರ್ಣವಾಗಿ ಬೆಂಕಿ ಆವರಿಸಿದ್ದು, ಬೇಕರಿಯಲ್ಲಿದ್ದ ಸರಕು ಮತ್ತು ಆಸ್ತಿಗೆ ಹಾನಿಯನ್ನುಂಟಾಗಿದೆ. 5 ಲಕ್ಷಕ್ಕೂ ಅಧಿಕ ಬೆಲೆಯ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.



