ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಕಣಿಯಾರು ಮಲೆ ಅರ್ತಿಯಡ್ಕ ಸಿಆರ್‌ಸಿ ಕಾಲನಿ ಬಳಿ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.

ಬೆಳಗಿನ ಜಾವ ರಬ್ಬರ್ ಟ್ಯಾಪಿಂಗ್‌ಗೆಂದು ಬಂದಿದ್ದ ಅರ್ತಿಯಡ್ಕದ ಮಹಿಳೆಯೊಬ್ಬರ ಮೇಲೆ ಎ.29 ಮಂಗಳವಾರ ಕಾಡಾನೆ ದಾಳಿ ಮಾಡಿದೆ. ಆನೆ ದಾಳಿಯಿಂದ ಮಹಿಳೆ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.



