12 ದಿನಗಳ ಹಿಂದೆ ನಾಪತ್ತೆಯಾಗಿದ್ದ ತಂದೆ ಹಾಗೂ ಇಬ್ಬರು ಮಕ್ಕಳ ಮೃತ ದೇಹಗಳು ಮಂಗಳವಾರ ಕೆ.ಆರ್.ಎಸ್ನ ವಿಸಿ ನಾಲೆಯಲ್ಲಿ ಕಾರಿನ ಸಮೇತ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಮೂವರು ಅಪಘಾತದಿಂದ ಮೃತಪಟ್ಟಿದ್ದಾರಾ ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾರಾ ಎಂಬುವುದು ಇನ್ನೂ ನಿಗೂಢವಾಗಿದೆ.
ಕುಮಾರಸ್ವಾಮಿ, ಅದ್ವೈತ್ (7) ಮತ್ತು ಅಕ್ಷರ (3) ಮೃತ ದುರ್ದೈವಿಗಳು. ಮೃತ ಕುಮಾರಸ್ವಾಮಿಯವರು ಮೂಲತಃ ಮೈಸೂರಿನ ಕೆ.ಆರ್.ನಗರದ ಹೆಬ್ಬಾಳುದವರು. ಕಳೆದ ಕೆಲ ವರ್ಷಗಳಿಂದ ಕುಟುಂಬದವರ ಜೊತೆ ಬೆಂಗಳೂರಿನಲ್ಲಿ ವಾಸವಿದ್ದರು. ಏಪ್ರಿಲ್ 17 ರಂದು ಕೆ.ಆರ್.ನಗರಕ್ಕೆ ಹೋಗುವುದಾಗಿ ಪತ್ನಿಗೆ ಹೇಳಿ ತನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ಕುಮಾರಸ್ವಾಮಿ ಕಾರಿನಲ್ಲಿ ಬೆಂಗಳೂರಿನಿಂದ ಹೊರಟಿದ್ದಾರೆ. ಆದರೆ, ಇಂದು ಆ ಮೂವರ ಮೃತ ದೇಹಗಳು ಕೆ.ಆರ್.ಎಸ್ ನಾರ್ಥ್ ಬ್ಯಾಂಕ್ನ ವಿಸಿ ನಾಲೆಯಲ್ಲಿ ಕಾರಿನ ಸಮೇತ ಪತ್ತೆಯಾಗಿದ್ದು, ಇದು ಅಪಘಾತವೋ ಅಥವ ಆತ್ಮಹತ್ಯೆಯೋ ಎಂಬ ಅನುಮಾನ ಮೂಡಿದೆ.
ಏಪ್ರಿಲ್ 17 ರ ರಾತ್ರಿ 8 ಗಂಟೆ ವೇಳೆ ಕುಮಾರಸ್ವಾಮಿಯವರು ತಮ್ಮ ತಂದೆಗೆ ಪೋನ್ ಮಾಡಿ ತಾವು ಕೆ.ಆರ್.ಎಸ್ ಬಳಿ ಇದ್ದು ಊರಿಗೆ ಬರುತ್ತಿರುವುದಾಗಿ ಹೇಳಿದ್ದಾರೆ. ಆದರೆ, ಅದಾದ ಬಳಿಕ ಪೋನ್ ಸ್ವಿಚ್ ಆಫ್ ಆಗಿದೆ. ಈ ಬಳಿಕ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ನಾಪತ್ತೆ ಪ್ರಕರಣ ದಾಖಲಿಸಿದ್ದರು. ಆದರೆ, ಇಂದು ನಾಲೆಗೆ ಹರಿಸುತ್ತಿದ್ದ ನೀರನ್ನು ನಿಲ್ಲಿಸಿದಾಗ ಕಾರು ಪತ್ತೆಯಾಗಿದ್ದು, ಈ ವೇಳೆ ಮೂವರ ಮೃತದೇಹಗಳು ಕೊಳೆತ ಸ್ಥಿತಿಯಲ್ಲಿ ಕಾರಿನಲ್ಲಿ ಪತ್ತೆಯಾಗಿವೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…