ದಿವಾಂಗ ತಂದೆಯೊಂದಿಗೆ ರೈಲ್ವೆ ನಿಲ್ದಾಣದಲ್ಲಿದ್ದಾಗ ಯುವತಿಯನ್ನು ಎಳೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬಿಹಾರದ ಗೋಪಾಲ್ಗಂಜ್ನಲ್ಲಿ ನಡೆದಿದೆ. ತಂದೆಗೆ ಚಿಕಿತ್ಸೆ ಕೊಡಿಸಲೆಂದು ಆಕೆ ತೆರಳುತ್ತಿದ್ದಳು. ರೈಲ್ವೆ ನಿಲ್ದಾಣದಲ್ಲಿ ತಂದೆಯೊಂದಿಗೆ ಕುಳಿತಿದ್ದಾಗ ಅತ್ಯಾಚಾರವೆಸಗಲಾಗಿದೆ. ಕುಚಾಯ್ಕೋಟ್ ಪೊಲೀಸ್ ಠಾಣೆ ವ್ಯಾಪ್ತಿಯ ಸಸಾ ಮುಸಾ ರೈಲು ನಿಲ್ದಾಣದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.
ವರದಿಗಳ ಪ್ರಕಾರ, ಸಂತ್ರಸ್ತೆ ವೈದ್ಯಕೀಯ ಚಿಕಿತ್ಸೆಗಾಗಿ ತನ್ನ ತಂದೆಯೊಂದಿಗೆ ಗೋಪಾಲ್‌ಗಂಜ್‌ಗೆ ಬಂದಿದ್ದರು. ಶ್ಯಾಮ್‌ಪುರದ ಸ್ಥಳೀಯ ವೈದ್ಯರ ಚಿಕಿತ್ಸಾಲಯದಲ್ಲಿ ಆಕೆಯ ತಂದೆ ಚಿಕಿತ್ಸೆ ಪಡೆದ ನಂತರ, ಭಾನುವಾರ ರಾತ್ರಿ ಅವರೊಂದಿಗೆ ಸಸಮುಸಾ ರೈಲ್ವೆ ನಿಲ್ದಾಣಕ್ಕೆ ಮರಳಿದರು ಆದರೆ ಇವರು ತಲುಪುವುದು ಸ್ವಲ್ಪ ತಡವಾದ ಪರಿಣಾಮ ರೈಲು ಕೈ ತಪ್ಪಿದೆ.
ರಾತ್ರಿಯಿಡೀ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದರು. ಬೆಳಗಿನ ಜಾವ 4 ಗಂಟೆ ಸುಮಾರಿಗೆ ಯುವತಿ ನೀರು ತರಲು ಹೋದಾಗ, ಹೊಂಚು ಹಾಕಿ ಕುಳಿತಿದ್ದ ಮೂವರು ಆಕೆಯ ಬಾಯಿ ಮುಚ್ಚಿ ಬಲವಂತವಾಗಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಹಲ್ಲೆಯ ನಂತರ ದಾಳಿಕೋರರು ಪರಾರಿಯಾಗಿದ್ದು, ಯುವತಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಆಕೆ ಸಹಾಯಕ್ಕಾಗಿ ಕಿರುಚಿಕೊಂಡಿದ್ದು, ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕುಚಾಯ್ಕೋಟ್ ಪೊಲೀಸರು ಸ್ಥಳಕ್ಕೆ ಧಾವಿಸಿ, ಆಕೆಯ ಗುರುತಿನ ಆಧಾರದ ಮೇಲೆ ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ಉಳಿದ ಇಬ್ಬರು ಶಂಕಿತರನ್ನು ಬಂಧಿಸಲು ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಸಂತ್ರಸ್ತೆಯನ್ನು ಚಿಕಿತ್ಸೆ ಮತ್ತು ವೈದ್ಯಕೀಯ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋಪಾಲ್‌ಗಂಜ್‌ನ ಎಸ್‌ಪಿ ಅವಧೇಶ್, ದೀಕ್ಷಿತ್ ಬಂಧನವನ್ನು ದೃಢಪಡಿಸಿದರು. ಇತರ ಅಪರಾಧಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಭರವಸೆ ನೀಡಿದರು. ಪೊಲೀಸರು ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯದ ಸಹಾಯದಿಂದ ವೈಜ್ಞಾನಿಕ ತನಿಖೆ ನಡೆಸುತ್ತಿದ್ದಾರೆ.
ಈ ಘಟನೆಯು ಸ್ಥಳೀಯ ನಿವಾಸಿಗಳಲ್ಲಿ ಆಕ್ರೋಶವನ್ನು ಹುಟ್ಟುಹಾಕಿದ್ದು, ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…