ದೇಶದಲ್ಲಿ ಬಿಜೆಪಿ ಸರಕಾರ ಇದ್ದಾಗಲೇ ಸಾಕಷ್ಟು ಬಾರಿ ಭಯೋತ್ಪಾದಕ ದಾಳಿಗಳಾಗಿವೆ. ಇದನ್ನು ಗಮನಿಸಿದರೆ ಬಿಜೆಪಿ ಮತ್ತು ಉಗ್ರರ ನಡುವೆ ಬಿಟ್ಟಿರಲಾರದ ಸಂಬಂಧ ಇದ್ದಂತಿದೆ. ದೇಶದ ಮೇಲೆ ದಾಳಿ ಆದಾಗ ಬಿಜೆಪಿ ಸರ್ಕಾರವೇ ಯಾಕಿರುತ್ತದೆ? ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲಾ ಅವರು ಮಂಗಳವಾರ ಪ್ರಶ್ನಿಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಇದ್ದಾಗಲೇ ದೇಶದ ಸಂಸತ್ ಮೇಲೆ ದಾಳಿ, ವಿಮಾನ ಹೈಜಾಕ್ ಮಾಡಲಾಗಿದೆ. ಮೋದಿ ಪ್ರಧಾನಿ ಆದ ಬಳಿಕವೇ ಪಠಾಣ್ ಕೋಟ್ ಮೇಲೆ ಉಗ್ರರ ದಾಳಿ ಆಯಿತು. ಉರಿ ಸೇನಾ ನೆಲೆ ಮೇಲೆ ದಾಳಿ, ಪುಲ್ವಾಮಾದಲ್ಲಿ ಸೇನಾ ವಾಹನ ಮೇಲೆ ಉಗ್ರರು ದಾಳಿ ಮಾಡಿದ್ದಾರೆ. ಅಮರನಾಥ ಯಾತ್ರಾರ್ಥಿಗಳ ಹತ್ಯೆ ಹಾಗೂ ಈಗ ಪಹಲ್ಗಾಮ್‌ನಲ್ಲಿನ ದಾಳಿ ಮಾಡಲಾಗಿದೆ. ಇದಕ್ಕೆ ಕಾರಣ ಏನು ಮೋದಿಯವರೇ? ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿಯ ಪಾಕಿಸ್ತಾನ ಪ್ರೇಮವನ್ನು ರಾಜ್ಯ ಬಿಜೆಪಿ ನಾಯಕರಿಗೆ ನೆನಪಿಸಬೇಕಿದೆ. ದೇಶದ ಇತಿಹಾಸದಲ್ಲೇ ಆಹ್ವಾನ ಇಲ್ಲದೇ ಪಾಕಿಸ್ತಾನಕ್ಕೆ ಹೋಗಿದ್ದು ಪ್ರಧಾನಿ ಮೋದಿ ಮಾತ್ರ. ಪಾಕ್‌ಗೆ ಹೋಗಿ ಮೋದಿ ಕೇಕ್ ಕತ್ತರಿಸಿ ಬಂದಾಗ ಪಠಾಣ್‌ಕೋಟ್ ದಾಳಿ ರಿಟರ್ನ್ ಗಿಫ್ಟ್ ಆಗಿ ಪಾಕಿಸ್ತಾನ ಕೊಟ್ಟಿತ್ತು. ಮೋದಿ ಪ್ರಧಾನಿ, ಅಮಿತ್ ಶಾ ಗೃಹಮಂತ್ರಿ ಇದ್ದಾಗ ಬಿಜೆಪಿ ಸರ್ಕಾರ ಪಠಾಣ್‌ಕೋಟ್ ದಾಳಿ ತನಿಖೆಗೆ ಐಎಸ್‌ಐಯನ್ನು ಭಾರತಕ್ಕೆ ಆಹ್ವಾನಿಸಿತ್ತು.
ಹಲವು ಬಾರಿ ಬಿಜೆಪಿ ನಾಯಕರು ಹಾಗೂ ಐಎಸ್‌ಐಗೆ ಲಿಂಕ್ ಇದೆ. ಬಜರಂಗದಳದ ಬಲರಾಮ್ ಸಿಂಗ್ ಐಎಸ್ಐ ಪರ ಕೆಲಸ ಮಾಡುತ್ತಿದ್ದಾಗ ಸಿಕ್ಕಿಕೊಂಡಿದ್ದರು. ಡಿಆರ್‌ಡಿಒದಲ್ಲಿ ಕೆಲಸ ಮಾಡುತ್ತಿದ್ದ ಪ್ರದೀಪ್ ಐಎಸ್ಐ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಅವರಿಗೆ ಆರ್‌ಎಸ್‌ಎಸ್ ಜೊತೆ ಸಂಬಂಧ ಇತ್ತು ಇಲ್ವಾ..? ಜಮ್ಮು ಕಾಶ್ಮೀರದಲ್ಲಿ ಆಸೀಫಾರನ್ನು ಬೇಟಿ ಬಚಾವೋ ಬೇಟಿ ಪಡಾವೋ ಮುಖವಾಡ ಹಾಕಿದ್ದ ಬಿಜೆಪಿ, ಅದೇ ಆಸೀಫಾ ಪಾಕ್‌ನಲ್ಲಿ ಉಗ್ರನ ಜೊತೆ ಸೇರಿ ಭಾರತದ ವಿರುದ್ಧ ವಿಷಕಾರಿದ್ದಳು ಅಲ್ಲವೇ? ಎಂದು ಪ್ರಶ್ನಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…