(ವಿದ್ಯಾಗಿರಿ)ಮೂಡುಬಿದಿರೆ: ಪತ್ರಿಕೆ, ಟಿ.ವಿ, ನವಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದಲ್ಲಿ ಯಶಸ್ವಿಯಾಗಲು ತಪ್ಪಿಲ್ಲದೇ ಬರೆಯುವ ಕಲೆ ಹಾಗೂ ಸೂಕ್ಷ್ಮ ಗ್ರಹಿಕೆ ಅತಿಮುಖ್ಯ ಎಂದು ಹಿರಿಯ ಪತ್ರಕರ್ತ ಸುರೇಂದ್ರ ವಾಗ್ಲೆ ಹೇಳಿದರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಮಂಗಳವಾರ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದ ಅವರು, ಮಾರ್ಗದರ್ಶನ ನೀಡಿದರು. ಮಾಧ್ಯಮದಲ್ಲಿ ಯಶಸ್ಸು ಪಡೆಯಲು ಪತ್ರಿಕೋದ್ಯಮ ಕಲಿಕೆಯ ಜೊತೆ ನಿಮ್ಮ ಆಸಕ್ತಿಯ ಒಂದು ಕ್ಷೇತ್ರದಲ್ಲಿ ತಜ್ಞತೆ ಪಡೆಯಬೇಕು. ವಿಜ್ಞಾನ, ತಂತ್ರಜ್ಞಾನ ಮತ್ತು ವಾಣಿಜ್ಯ ವಿಷಯದ ತಜ್ಞರಿಗೆ ಹೆಚ್ಚಿನ ಅವಕಾಶವಿದೆ. ಆಸಕ್ತಿಯ ವಿಷಯದಲ್ಲಿ ಹೆಚ್ಚು ಅಧ್ಯಯನ ನಡೆಸಿದಾಗ, ಭವಿಷ್ಯದಲ್ಲಿ ಅವಕಾಶ ಹೆಚ್ಚುತ್ತದೆ ಎಂದರು. ಪತ್ರಿಕೋದ್ಯಮ ವಿದ್ಯಾರ್ಥಿಗಳು ದಿನನಿತ್ಯ ಪತ್ರಿಕೆ ಓದಬೇಕು. ಬರವಣಿಗೆ ಮತ್ತು ಅನುವಾದದಲ್ಲಿ ಕರಗತರಾಗಬೇಕು. ಇಂಗ್ಲಿಷ್ ಪಕ್ವವಾಗಿದ್ದರೆ, ಇಂಗ್ಲಿಷ್ ಪತ್ರಿಕೋದ್ಯಮದಲ್ಲಿ ಉತ್ತಮ ಅವಕಾಶ ಇದೆ ಎಂದರು.
ನವ ಮಾಧ್ಯಮಗಳಿಗೆ ಹೋಗುವ ಕನಸನ್ನು ಬಹುತೇಕರು ಕಾಣುತ್ತಾರೆ. ಆದರೆ, ಅಂತಹ ಮಾಧ್ಯಮಗಳಲ್ಲೂ ಯಶಸ್ವಿಯಾಗಲು ಯಾವುದಾದರು ಒಂದು ಭಾಷೆಯ ಮೇಲೆ ಹಿಡಿತ ಹಾಗೂ ಓದು ಅವಶ್ಯ ಎಂದರು. ವಿಜಯವಾಣಿ ಮಂಗಳೂರು ವಿಭಾಗದ ಹಿರಿಯ ಉಪ ಸಂಪಾದಕ ಮೋಹನ್ ದಾಸ್ ಮರಕಡ, ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಇದ್ದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…