ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿದ್ದು, ಈ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಅಮೆರಿಕಾ ಬಿಕ್ಕಟ್ಟಿಗೆ “ಜವಾಬ್ದಾರಿಯುತ ನಿರ್ಣಯ” ಕೈಗೊಳ್ಳುವಂತೆ ಎರಡೂ ರಾಷ್ಟ್ರಗಳಿಗೆ ಒತ್ತಾಯಿಸಿದೆ.
ಭಾರತ ಹಾಗೂ ಪಾಕಿಸ್ತಾನ ನಡುವಣ ಬಿಕ್ಕಟ್ಟಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ನಾವು ಭಾರತ ಹಾಗೂ ಪಾಕಿಸ್ತಾನ ಸರ್ಕಾರಗಳೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರರು ಹೇಳಿದ್ದಾರೆ.
ಉಭಯ ರಾಷ್ಟ್ರಗಳು ಒಗ್ಗಟ್ಟಾಗಿ ಕೆಲಸ ಮಾಡಿ ಬಿಕ್ಕಟ್ಟಿಗೆ ಜವಾಬ್ದಾರಿಯುತ ಪರಿಹಾರ ಕಾಣಬೇಕು ಎಂದು ಅಮೆರಿಕಾ ಬಯಸುತ್ತದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸುತ್ತೇವೆ. ಅಮೆರಿಕಾ ಭಾರತದ ಪರ ನಿಲ್ಲುತ್ತದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಹೇಳಿಕೆಯನ್ನು ವಿದೇಶಾಂಗ ಸಚಿವಾಲಯ ಪುನರುಚ್ಚರಿಸಿದೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22ರಂದು ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ದಾಳಿಯಲ್ಲಿ 26 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಉಗ್ರರ ದಾಳಿಯ ಬೆನ್ನಲ್ಲೇ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ನಿಗ್ನ ವಾತಾವರಣ ನಿರ್ಮಾಣವಾಗಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…