ಮಂಗಳೂರು: ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವ ತನ್ನ ತಂದೆ ತಾಯಿಯನ್ನು ರಾಡ್ ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಮಂಗಳವಾರ ನಡೆದಿದೆ.
ಕೊಲೆಯಾದ ದಂಪತಿಗಳನ್ನು ಮಂಗಳೂರಿನ ಭಾಸ್ಕರ್ (64) ಮತ್ತು ಕೇಂದ್ರ ಸರ್ಕಾರಿ ನಿವೃತ್ತ ಉದ್ಯೋಗಿ ಶಾಂತಾ (60) ಎಂದು ಗುರುತಿಸಲಾಗಿದೆ.
ಮೂಲತಃ ಮಂಗಳೂರಿನವರಾದ ಈ ಕುಟುಂಬ ಬೆಂಗಳೂರಿನಲ್ಲಿ ನೆಲೆಸಿದೆ. ಅವರಿಗೆ ಇಬ್ಬರು ಮಕ್ಕಳಿದ್ದು, ಹಿರಿಯ ಮಗ ಖಾಸಗಿ ಕಂಪನಿಯಲ್ಲಿ ಉದ್ಯೋಗಿ. 2ನೇ ಮಗ ಆರೋಪಿ ಶರತ್ (27) ಎಂದು ಗುರುತಿಸಲಾಗಿದೆ. ಘಟನೆ ಬಳಿಕ ಆರೋಪಿ ಶರತ್ ನಾಪತ್ತೆಯಾಗಿದ್ದು, ಆತನಿಗಾಗಿ ಶೋಧ ನಡೆಸಲಾಗುತ್ತಿದೆ.
ಇಂದು ಬೆಳಗ್ಗೆ ಕೆಲಸಕ್ಕೆ ತೆರಳಿದ್ದ ಹಿರಿಯ ಮಗ ಪೋಷಕರಿಗೆ ಕರೆ ಮಾಡಿದ್ದಾನೆ. ಯಾರೂ ಉತ್ತರಿಸದಿದ್ದಾಗ ಪಕ್ಕದ ಮನೆಯವರಿಗೆ ಕರೆ ಮಾಡಿ ಪೋಷಕರ ಬಗ್ಗೆ ವಿಚಾರಿಸಿದ್ದಾರೆ. ಅಕ್ಕಪಕ್ಕದವರು ಬಂದು ನೋಡಿದಾಗ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ. ಶರತ್ ಮಾನಸಿಕವಾಗಿ ನೊಂದಿದ್ದು, ಪೋಷಕರೊಂದಿಗೆ ಜಗಳವಾಡುತ್ತಿದ್ದ. 20 ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಿದ್ದ ಶರತ್ ಯಾವಾಗಲೂ ಮನೆಯಲ್ಲೇ ಇರುತ್ತಿದ್ದ. ಕೆಲಸವಿಲ್ಲದೆ ಮನೆಯಲ್ಲಿದ್ದ ಶರತ್ ನ ವರ್ತನೆ ಸೈಕೋ ತರಹ ಇತ್ತು ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಅಹಿತಿ ಶರತ್ ಸಿಕ್ಕಿದ ನಂತರ ತಿಳಿದುಬರಬೇಕಿದೆ.



