ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಸಿಂಹಾಚಲಂ ದೇವಾಲಯದಲ್ಲಿ ಹೊಸದಾಗಿ ನಿರ್ಮಿಸಲಾದ ಗೋಡೆ ಕುಸಿದು ಎಂಟು ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ.
ಬುಧವಾರ ಮುಂಜಾನೆ ಚಂದನೋತ್ಸವಂ ಹಬ್ಬದ ಸಂದರ್ಭದಲ್ಲಿ 20 ಅಡಿ ಉದ್ದದ ಗೋಡೆ ಕುಸಿದಿದೆ. ಈ ಗೋಡೆಯನ್ನು 20 ದಿನಗಳ ಹಿಂದೆ ನಿರ್ಮಿಸಲಾಗಿದೆ ಎಂದು ವರದಿಯಾಗಿದೆ. NDRF ಮತ್ತು SDRF ತಂಡಗಳು ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ.
ಗಾಯಗೊಂಡ ಭಕ್ತರನ್ನು ಚಿಕಿತ್ಸೆಗಾಗಿ ಕಿಂಗ್ ಜಾರ್ಜ್ ಆಸ್ಪತ್ರೆಗೆ ಸಾಗಿಸಲಾಗಿದೆ. ಆಂಧ್ರಪ್ರದೇಶದ ಗೃಹ ಸಚಿವೆ ಮತ್ತು ವಿಪತ್ತು ನಿರ್ವಹಣಾ ಸಚಿವೆಯಾಗಿರುವ ಅನಿತಾ ವಂಗಲಪುಡಿ ಅವರು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯ ಮೇಲ್ವಿಚಾರಣೆಗಾಗಿ ಸ್ಥಳಕ್ಕೆ ಭೇಟಿ ನೀಡಿ, ಸಿಂಹಾಚಲಂ ದೇವಾಲಯದ ಗೋಡೆ ಕುಸಿತಕ್ಕೆ ಆ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮಣ್ಣು ಸಡಿಲಗೊಂಡಿರುವುದು ಕಾರಣ ಎಂದು ಪ್ರಾಥಮಿಕ ವರದಿಗಳು ಸೂಚಿಸಿವೆ ಎಂದು ಅವರು ತಿಳಿಸಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…