ಜನ ಮನದ ನಾಡಿ ಮಿಡಿತ

Advertisement

ಗೋವಾ : ಗೋವಾದ ಶಿರ್ಗಾಂವ್‌​​​ ದೇವಸ್ಥಾನದಲ್ಲಿ ಕಾಲ್ತುಳಿತ: 7 ಜನ ದುರ್ಮರಣ, 30ಕ್ಕೂ ಹೆಚ್ಚು ಜನರಿಗೆ ಗಾಯ

ಉತ್ತರ ಗೋವಾದ ಶಿರ್ಗಾಂವ್‌ ದೇವಸ್ಥಾನದ ಜಾತ್ರಾ ಮಹೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 7 ಜನರು ದುರ್ಮರಣ ಹೊಂದಿದ್ದು, 30ಕ್ಕೂ ಅಧಿಕ ಜನರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ.

ತಕ್ಷಣ ಪೊಲೀಸರು ಮತ್ತು ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಮಾಪುಸಾದ ಗೋವಾ ವೈದ್ಯಕೀಯ ಕಾಲೇಜು ಮತ್ತು ಉತ್ತರ ಗೋವಾ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಗೋವಾದ ಶಿರ್ಗಾಂವ್‌​​ ಗ್ರಾಮದಲ್ಲಿ ಲೈರೈ ದೇವಿ ವಾರ್ಷಿಕ ಜಾತ್ರಾ ಮಹೋತ್ಸವ ನಡೆದಿತ್ತು. ಶತಮಾನಗಳಷ್ಟು ಹಳೆಯದಾದ ದೇವಸ್ಥಾನದ ಆಚರಣೆಗಳನ್ನು ನೋಡಲು ಸಾವಿರಾರು ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಜಾತ್ರಾ ಮಹೋತ್ಸವ ವೇಳೆ ಜನರು ಒಂದು ಗುಂಪೊಂದು ನಿಯಂತ್ರಣ ಕಳೆದುಕೊಂಡು ಕಾಲ್ತುಳಿತ ಸಂಭವಿಸಿದೆ. ನಂತರ ಪರಿಸ್ಥಿತಿ ವಿಕೋಪಕ್ಕೆ ಹೋಯಿತು. ಸ್ಥಳೀಯರು ಮತ್ತು ಸ್ವಯಂಸೇವಕರು ಜನರನ್ನು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋದರು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!