ಉತ್ತರ ಗೋವಾದ ಶಿರ್ಗಾಂವ್ ದೇವಸ್ಥಾನದ ಜಾತ್ರಾ ಮಹೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 7 ಜನರು ದುರ್ಮರಣ ಹೊಂದಿದ್ದು, 30ಕ್ಕೂ ಅಧಿಕ ಜನರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ.
ತಕ್ಷಣ ಪೊಲೀಸರು ಮತ್ತು ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಮಾಪುಸಾದ ಗೋವಾ ವೈದ್ಯಕೀಯ ಕಾಲೇಜು ಮತ್ತು ಉತ್ತರ ಗೋವಾ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಗೋವಾದ ಶಿರ್ಗಾಂವ್ ಗ್ರಾಮದಲ್ಲಿ ಲೈರೈ ದೇವಿ ವಾರ್ಷಿಕ ಜಾತ್ರಾ ಮಹೋತ್ಸವ ನಡೆದಿತ್ತು. ಶತಮಾನಗಳಷ್ಟು ಹಳೆಯದಾದ ದೇವಸ್ಥಾನದ ಆಚರಣೆಗಳನ್ನು ನೋಡಲು ಸಾವಿರಾರು ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿದೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಜಾತ್ರಾ ಮಹೋತ್ಸವ ವೇಳೆ ಜನರು ಒಂದು ಗುಂಪೊಂದು ನಿಯಂತ್ರಣ ಕಳೆದುಕೊಂಡು ಕಾಲ್ತುಳಿತ ಸಂಭವಿಸಿದೆ. ನಂತರ ಪರಿಸ್ಥಿತಿ ವಿಕೋಪಕ್ಕೆ ಹೋಯಿತು. ಸ್ಥಳೀಯರು ಮತ್ತು ಸ್ವಯಂಸೇವಕರು ಜನರನ್ನು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋದರು ಎಂದು ಹೇಳಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…