ವಕೀಲರ ಸಂಘ (ರಿ), ಬಂಟ್ವಾಳ ಇದರ 2025-27ನೇ ಸಾಲಿನ ಅಧ್ಯಕ್ಷ ಸ್ಥಾನಕ್ಕಾಗಿ ಚುನಾವಣೆ ಸಂಘದ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ಮರು ಆಯ್ಕೆ ಬಯಸಿ ರಿಚರ್ಡ್ ಕೋಸ್ತಾ ಎಂ ರವರು ಸ್ಪರ್ದಿಸಿದ್ದು, ಬಹುಮತದಿಂದ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮರು ಆಯ್ಕೆ ಯಾಗಿರುತ್ತಾರೆ.
ಉಪಾಧ್ಯಕ್ಷರಾಗಿ ದಯಾನಂದ ರೈ, ಪ್ರದಾನ ಕಾರ್ಯದರ್ಶಿಯಾಗಿ ಕೆ ನರೇಂದ್ರನಾಥ ಭಂಢಾರಿ, ಜೊತೆ ಕಾರ್ಯದರ್ಶಿಯಾಗಿ ಅಕ್ಷತಾ ಶೆಟ್ಟಿ, ಕೋಶಾಧಿಕಾರಿಯಾಗಿ ಜೆಸಿಂತಾ ಕ್ರಾಸ್ತಾ ರವರು ಅವಿರೋಧವಾಗಿ ಆಯ್ಕೆ ಯಾಗಿರುತ್ತಾರೆ. ಅಧ್ಯಕ್ಷರ ಚನಾವಣೆಗಾಗಿ 244 ಅರ್ಹ ಮತದಾರರ ಪಟ್ಟಿಯಲ್ಲಿ 222 ಮತಗಳು ಚಲಾವಣೆ ಯಾಗಿದ್ದು ರಿಚರ್ಡ್ ಕೋಸ್ತಾ ಎಂ ರವರು 123 ಮತಗಳನ್ನು ಪಡೆದು ಜಯ ಗಳಿಸಿರುತ್ತಾರೆ. ವಕೀಲರಾದ ಎಚ್. ಸತೀಶ್ ರಾವ್ ರವರು ಮುಖ್ಯ ಚುನಾವಣಾಧಿಕಾರಿಯಾಗಿದ್ದು, ಕೆ. ವಿ. ಭಟ್ ಮತ್ತು ಎಂ. ವಿ. ಭಟ್ ರವರು ಉಪ ಚುನಾವಣಾ ಧಿಕಾರಿಗಳಾಗಿ ಸೀನಿಯರ್ ಕಮಿಟಿ ಸದಸ್ಯರಾದ ಎಂ. ಈಶ್ವರ ಉಪಾಧ್ಯಾಯ ರವರ ಮೇಲುಸ್ತುವಾರಿ ಯಲ್ಲಿ ಮತದಾನ ಪ್ರಕ್ರಿಯೆ ನಡೆದಿರುತ್ತದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…