ಉಡುಪಿ: ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶ ಕ್ರೋಢೀಕರಿಸಲು ಮೇ 5ರಿಂದ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಗಳ ಸಮೀಕ್ಷೆ ನಡೆಯಲಿದೆ.
ಮೂರು ಹಂತದಲ್ಲಿ ಸಮೀಕ್ಷೆ ನಡೆಯಲಿದ್ದು, ಪರಿಶಿಷ್ಟ ಜಾತಿಯವರ ಮನೆಗಳಿಗೆ ಮಾತ್ರ ಭೇಟಿ ನೀಡಿ ವಿವರ ಪಡೆಯಲಾಗುವುದು. ಮೇ 5ರಿಂದ 17ರವರೆಗೆ ಮನೆ ಮನೆ ಸಮೀಕ್ಷೆ, ಮೇ 19ರಿಂದ 21ರ ವರೆಗೆ ಅಲ್ಲಲ್ಲಿ ಕ್ಯಾಂಪ್ ಮಾಡಿ ದಾಖಲೀಕರಣ ಹಾಗೂ ಮೂರನೇ ಹಂತದಲ್ಲಿ ಆನ್‌ಲೈನ್ ಮೂಲಕ ನಮೂದು ಕಾರ್ಯ ನಡೆಯಲಿದೆ. 2011ರ ಸಮೀಕ್ಷೆ ಪ್ರಕಾರ ಜಿಲ್ಲೆಯಲ್ಲಿ 75 ಸಾವಿರ ಪ.ಜಾತಿ ಜನಸಂಖ್ಯೆಯಿದ್ದು, ನಿರ್ದಿಷ್ಟ ಕಾಲಮಿತಿಯಲ್ಲಿ ಸಮೀಕ್ಷೆ ಪೂರ್ಣಗೊಳಿಸಲು ಯೋಜಿಸಲಾಗಿದೆ.ಜಿಲ್ಲೆಯ ಮಾಸ್ಟರ್ ಟ್ರೈನರ್‌ಗಳಿಂದ 35 ತಾಲೂಕು ಮಟ್ಟದ ಟ್ರೈನರ್‌ಗಳಿಗೆ ತರಬೇತಿ ನೀಡಲಾಗಿದೆ. 1112 ಶಿಕ್ಷಕರು ಹಾಗೂ 112 ಮೇಲ್ವಿಚಾರಕರು ಈ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವರು. ಸಮೀಕ್ಷೆ ಕುರಿತ ಮಾಹಿತಿಗೆ 9480843046, ಸಹಾಯವಾಣಿಗೂ ಕರೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.
ಆಧಾರ್ ಕಾರ್ಡ್ ಅಥವಾ ರೇಷನ್ ಕಾರ್ಡ್ ಸಹಿತ ಯಾವುದಾದರೂ ಒಂದು ದಾಖಲೆ ನೀಡಬೇಕು. .
ರಾಷ್ಟ್ರಪತಿಗಳಿಂದ ಅನುಮೋದನೆ ಪಡೆದಿರುವ 101 ಜಾತಿಗಳ ಪಟ್ಟಿಯನ್ನು ಸಿದ್ಧಪಡಿಸಿ ಸರಕಾರವೇ ನೀಡಿದೆ. ಮೊಬೈಲ್ ಆ್ಯಪ್ ಮೂಲಕ ಸರ್ವೆ ನಡೆಯಲಿದ್ದು ಸಮೀಕ್ಷೆಗೆ ಸಂಬಂಧಿಸಿದ ಎಲ್ಲ ಮಾಹಿತಿ ನೀಡಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…