ಮಂಗಳೂರಿನಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪೈಲ್ ಮತ್ತು ಬಜರಂಗದಳದ ಮುಖಂಡ ಭರತ್ ಕುಮ್ಡೇಲ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆ ಹಾಕಿರುವ ವಿಚಾರವಾಗಿ ಕದ್ರಿ ಮತ್ತು ಬಂಟ್ವಾಳ ಗ್ರಾಮಾಂತರ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಎಸ್‌ಡಿಪಿಐ ಮುಖಂಡ ರಿಯಾಜ್ ಕಡಂಬು ಅವರಿಗೂ ಬೆದರಿಕೆ ಇದ್ದು, ಆ ಬಗ್ಗೆಯೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಶರಣ್ ಪಂಪೈಲ್‌ಗೆ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಜೀವ ಬೆದರಿಕೆ ಒಡ್ಡಿದ್ದರು. “ಮುಂದಿನ ಟಾರ್ಗೆಟ್ ಶರಣ್ ಪಂಪೈಲ್” ಎಂದು ಪೋಸ್ಟ್ ಮಾಡಿದ್ದರು. “ಮುಂದಿನ ಟಾರ್ಗೆಟ್ ಶರಣ್ ಪಂಪೈಲ್. ಶರಣ್ ಹತ್ಯೆಯಾಗಲು ತಯಾರಾಗು” ಎಂದು ಸಾಮಾಜಿಕ ಮಾಧ್ಯಮ ಸಂದೇಶದಲ್ಲಿ ಬೆದರಿಕೆ ಹಾಕಲಾಗಿತ್ತು.
ಶರಣ್ ಪಂಪೈಲ್ ಮಾತ್ರವಲ್ಲದೆ ಇನ್ನೂ ಕೆಲವು ಮಂದಿ ಮುಖಂಡರಿಗೆ ಸಾಮಾಜಿಕ ಮಾಧ್ಯಮದ ಮೂಲಕ ಬೆದರಿಕೆ ಹಾಕಲಾಗಿದೆ. ಬಜರಂಗದಳ ಮುಖಂಡ ಭರತ್ ಕುಮ್ಡೇಲ್ ಹತ್ಯೆ ಬೆದರಿಕೆ ಸಂದೇಶ ವಿಚಾರವಾಗಿ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿಎನ್‌ಎಸ್ ಕಾಯ್ದೆ 196(1)(C), 353(2) ಸೆಕ್ಷನ್ ಅಡಿ ಪ್ರಕರಣ ದಾಖಲಿಸಲಾಗಿದೆ. “ಅಶ್ರಫ್ ಕೊಂದ ಭರತ್‌ನನ್ನು ಮರೆತಿಲ್ಲ ಎಂದು ಪೋಸ್ಟ್ ಹಾಕಿದ್ದಾರೆ.
ಇನ್ನು ಎಸ್‌ಡಿಪಿಐ ಮುಖಂಡ ರಿಯಾಜ್ ಕಡಂಬು ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿದವರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಕೊಲೆ ಬೆದರಿಕೆ ಹಾಕಿದ ಕೆ.ಆರ್ ರಾಕೇಶ್ ವಿರುದ್ಧ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಯೂಟ್ಯೂಬ್‌ನಲ್ಲಿ ಸುಹಾಸ್ ಶೆಟ್ಟಿ ಕೊಲೆ ಸುದ್ದಿ ಪ್ರಸಾರವಾಗುತ್ತಿದ್ದ ವೇಳೆ ಕಮೆಂಟ್ ಮೂಲಕ ಕೊಲೆ ಬೆದರಿಕೆ ಹಾಕಲಾಗಿತ್ತು. “Next is Riyaz Kadanbu hit list” ಎಂದು ಕಮೆಂಟ್ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ರಿಯಾಜ್ ಕಡಂಬು ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…
ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…
ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…
‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…
ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…