ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಕ್ರಾಸ್ ಬಳಿ ನಡೆದಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದವರು ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.




