ಇತ್ತೀಚಿನ ದಿನಗಳಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ನಿಯಂತ್ರಣದ ಮುಂಜಾಗ್ರತಾ ಕ್ರಮವಾಗಿ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಲ್ಲಾ ಚೆಕ್ ಪೋಸ್ಟ್ ಗಳಲ್ಲಿ ಎಲ್ಲಾ ವಾಹನ ತಪಾಸಣೆ ನಡೆಸುತ್ತಿದ್ದು ವಾಹನಗಳಿಗೆ ಅಳವಡಿಸಲಾದ ಕಪ್ಪು ಬಣ್ಣದ ಟಿಂಟ್ ಗಳನ್ನು ತೆಗೆಸಲಾಗುತ್ತಿದೆ.

ಮುಂದಕ್ಕೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಅಂತವರ ಚಲನವಲನಗಳ ಮೇಲೆ ನಿಗಾ ವಹಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಠಾಣಾ ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತು ನಿಯೋಜಿಸಲಾಗಿದೆ.



