ಪುತ್ತೂರು: ಉದ್ಯಮಿ ಹಾಗೂ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭ ಅರುಣ್ ಕುಮಾರ್ ಅವರ ಪುತ್ತಿಲ ಪರಿವಾರದಲ್ಲಿ ಪ್ರಧಾನವಾಗಿ ಗುರುತಿಸಿಕೊಂಡಿದ್ದ ಎಡಕ್ಕಾನ ರಾಜಾರಾಮ ಭಟ್ ರವರು ಇಂದು ಮುಂಜಾನೆ ದುಬೈಯಲ್ಲಿ ಹೃದಯಾಘಾತದಿಂದ ನಿಧನಾರಾದರೆಂದು ತಿಳಿದುಬಂದಿದೆ.
ಸುಳ್ಯದ ಕಲ್ಮಡ್ಕ ಗ್ರಾಮದ ಶೆಟ್ಟಿಗದ್ದೆ ಎಂಬಲ್ಲಿಯ ನಿವಾಸಿಯಾದ ರಾಜಾರಾಮ ಭಟ್ ರು ಎಡಕ್ಕಾನ ಟ್ರೇಡರ್ಸ್ ಎಂಬ ವ್ಯಾಪಾರ ಮಳಿಗೆಯನ್ನು ಹೊಂದಿದ್ದರಲ್ಲದೆ, ದುಬೈ, ಮಸ್ಕತ್ ಗಳಲ್ಲಿ ಖರ್ಜೂರದ ವ್ಯಾಪಾರ ಕೂಡ ಹೊಂದಿದ್ದರು. ವ್ಯವಹಾರದ ನಿಮಿತ್ತ ಕೆಲದಿನಗಳ ಹಿಂದೆ ದುಬೈಗೆ ಹೋಗಿದ್ದ ಅವರು ಅಲ್ಲಿ ಇಂದು ಮುಂಜಾನೆ ಹೃದಯಾಘಾತದಿಂದ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.
ಕಳೆದ ವಿಧಾನ ಸಭಾ ಚುನಾವಣೆಯ ಸಂದರ್ಭ ಅರುಣ್ ಕುಮಾರ್ ಪುತ್ತಿಲ ಬಿ.ಜೆ.ಪಿ. ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವಲ್ಲಿ ಎಡಕ್ಕಾನ ರಾಜಾರಾಮರು ಪ್ರಧಾನ ಪಾತ್ರ ವಹಿಸಿದ್ದರು. ಚುನಾವಣೆ ಕಳೆದು ಒಂದು ವರ್ಷದ ಬಳಿಕ ಪುತ್ತಿಲರೊಂದಿಗೆ ಭಿನ್ನಾಭಿಪ್ರಾಯ ಬಂದು ಅವರು ಪುತ್ತಿಲ ಪರಿವಾರ ತೊರೆದಿದ್ದರಲ್ಲದೆ, ಪುತ್ತಿಲರ ವಿರುದ್ಧ ಕೇಸು ಆಗುವುದರಲ್ಲೂ ಪಾತ್ರ ವಹಿಸಿದ್ದರು.
ಈ ಹಿಂದೆಯೂ ಒಮ್ಮೆ ಹೃದಯಾಘಾತಕ್ಕೊಳಗಾಗಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…