ಮಂಗಳೂರು: ನವೋದಯ ಸ್ವಸಹಾಯ ಗುಂಪುಗಳು ಗ್ರಾಮೀಣ ಜನರ ಬದುಕಿನಲಿ ಆರ್ಥಿಕ ಸ್ವಾವಲಂಬನೆಯನ್ನು ಮೂಡಿಸಿ ಪ್ರಜಾಪ್ರಭುತ್ವದ ತಳಹದಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಸಂಘಟನೆ ಹಾಗೂ ಜನಜಾಗೃತಿ ಮೂಲಕ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ವತಿಯಿಂದ’ ನವೋದಯ ’ರಜತ ಸಂಭ್ರಮ’ ಮೇ 10ರಂದು ಪೂರ್ವಾಹ್ನ 10.3೦ಕ್ಕೆ ನಗರದ ಬಂಗ್ರ ಕೂಳೂರುನಲ್ಲಿರುವ ಗೋಲ್ಡ್ ಫಿಂಚ್ ಸಿಟಿಯಲ್ಲಿ ಅದ್ದೂರಿಯಾಗಿ ನಡೆಯಲಿದೆ.
ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್, ನವೋದಯ ಸ್ವಸಹಾಯ ಗುಂಪುಗಳ ಕಾರ್ಯ ವಿಸ್ತಾರವು ಇಂದು ರಾಜ್ಯದ 8 ಜಿಲ್ಲೆಗಳಿಗೆ ಪಸರಿಸಿದ್ದು, ಇದರಲ್ಲಿ ಸುಮಾರು ೮ರಿಂದ 9ಲಕ್ಷ ಸದಸ್ಯರಿದ್ದು, ಮುಖ್ಯವಾಗಿ ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಲ್ಪಿಸಿಕೊಟ್ಟಿದೆ. ಮಹಿಳೆಯರು ಪುರುಷರಿಗೆ ಸರಿ ಸಮಾನವಾಗಿ ಬದುಕು ಕಟ್ಟಿಕೊಳ್ಳಲು ಕಾರಣವಾಗಿದೆ. ಆದ ಕಾರಣ ನವೋದಯದ ರಜತ ಸಂಭ್ರಮವನ್ನು ದೇಶಕ್ಕೆ ಮಾದರಿಯಾಗಿ ಹಮ್ಮಿಕೊಳ್ಳುವ ಯೋಜನೆ ರೂಪಿಸಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.ಸುಮಾರು 3೦೦೦ದಷ್ಟು ಬಸ್‌ಗಳಲ್ಲಿ ಜನ ವಿವಿಧ ಕಡೆಗಳಿಂದ ಸಮಾವೇಶದ ಸ್ಥಳಕ್ಕೆ ಆಗಮಿಸಲಿದ್ದಾರೆ. ಈ ಚಾರಿತ್ರಿಕ ಸಮಾವೇಶದಲ್ಲಿ ಸುಮಾರು 1.5 ಲಕ್ಷಕ್ಕೂ ಮಿಕ್ಕಿ ಮಹಿಳೆಯರು ನೀಲಿ ಬಣ್ಣದ ಸಮವಸ್ತ್ರದಲ್ಲಿ ಭಾಗವಹಿಸಲಿದ್ದು, ಸಮಾವೇಶ ದೇಶಕ್ಕೆ ಮಾದರಿಯಾಗುವ ಸಮಾವೇಶಆಗಲಿದೆ. ಈ ಅರ್ಥಪೂರ್ಣ ರಜತ ಸಂಭ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.ನವೋದಯರಜತ ಸಂಭ್ರಮದ ನೆನಪಿಗಾಗಿ ವಿಶಿಷ್ಟ ರೀತಿಯ ಲಾಂಛನವನ್ನು ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಬಿಡುಗಡೆಗೊಳಿಸಲಿರುವರು ಎಂದರು.
ನವೋದಯ ಸ್ವ-ಸಹಾಯ ಗುಂಪುಗಳ ಸದಸ್ಯರುಗಳಿಗೆ ಸವಲತ್ತು ವಿತರಣೆಯನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೆರವೇರಿಸುವರು. ರಜತ ಸಂಭ್ರಮದ “ಸಂತೃಪ್ತಿ” ಸ್ಮರಣ ಸಂಚಿಕೆಯನ್ನು ಉಪಮುಖ್ಯಮಂತ್ರಿU ಡಿ.ಕೆ.ಶಿವಕುಮಾರ್ ಬಿಡುಗಡೆಗೊಳಸುವರು.
ರಜತ ಸಂಭ್ರಮ ಆಚರಣೆಯ ಸಂದರ್ಭ ಸಹಕಾರಿ ಧ್ವಜಾರೋಹಣವನ್ನು ಸ್ಪೀಕರ್ ಯು.ಟಿ. ಖಾದರ್ ಫರೀದ್ ನೆರವೇರಿಸಲಿರುವರು. ಅತ್ಯುತ್ತಮ ನವೋದಯ ಗುಂಪುಗಳಿಗೆ ಪ್ರಶಸ್ತಿ ಪ್ರದಾನವನ್ನು ಕೇಂದ್ರ ಸಚಿವ ಪಹ್ಲಾದ್ ವಿ.ಜೋಶಿಇವರು ನೆರವೇರಿಸುವರು. ಕರ್ನಾಟ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ.. ಬೆಂಗಳೂರು ಹಾಗೂ ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಸಂಸ್ಥಾಪಕ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸುವರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಹಾಗೂ ಉಡುಪಿ ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಸಚಿವ ಕೆ.ಎನ್. ರಾಜಣ್ಣ, ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯ್ಲಿ, ದ. ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಚಿವರಾದ ಶಿವಾನಂದ ಪಾಟೀಲ, ಆರ್.ಬಿ. ತಿಮ್ಮಾಪುರಅವರು ಭಾಗವಹಿಸುವರು ಎಂದರು.
ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಭಾಸ್ಕರ್.ಎಸ್. ಕೋಟ್ಯಾನ್, ಶಶಿಕುಮಾರ್ ರೈ ಬಿ., ದೇವಿ ಪ್ರಸಾದ್ ಶೆಟ್ಟಿ ಬೆಳಪು, ಎಂ. ವಾದಿರಾಜ ಶೆಟ್ಟಿ , ಎಸ್. ಬಿ. ಜಯರಾಮ್ ರೈ, ಸದಾಶಿವ ಉಳ್ಳಾಲ್, ರಾಜೇಶ್ ರಾವ್, ಕುಶಾಲಪ್ಪ ಗೌಡ, ಸಹಕಾರ ಸಂಘಗಳ ಉಪನಿಬಂಧಕ ಎಚ್. ಎನ್. ರಮೇಶ್, ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ..,ನವೋದಯ ಟ್ರಸ್ಟಿಗಳಾದ ಮೇಘರಾಜ್ ಆರ್. ಜೈನ್, ಸುನಿಲ್ ಕುಮಾರ್ ಬಜಗೋಳಿ, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಟ್ರಸ್ಟ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಶೆಟ್ಟಿ ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…