ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮಂಗಳೂರು: ಹೆಡ್‌ ಕಾನ್‌ಸ್ಟೇಬಲ್ ರಶೀದ್ ತನಿಖೆಯಾದಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಹಿಂದಿನ ರಹಸ್ಯ ಬಯಲು- ಕೆ.ಟಿ.ಉಲ್ಲಾಸ್ ಆಗ್ರಹ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಜ್ಪೆ ಠಾಣಾ ಹೆಡ್‌ ಕಾನ್‌ಸ್ಟೇಬಲ್ ರಶೀದ್ ಕೂಡಾ ಸೇರಿದ್ದಾರೆ ಎಂಬ ಶಂಕೆ ಬಲವಾಗಿದೆ. ಆದ್ದರಿಂದ ರಶೀದ್‌ರನ್ನು ತನಿಖೆಗೊಳಪಡಿಸಿದರೆ, ಇದರ ಹಿಂದಿರುವ ಪೂರ್ಣ ಮಾಹಿತಿ ದೊರೆಯಲು ಸಾಧ್ಯ ಎಂದು ಹಿಂದೂ ಜಾಗರಣ ವೇದಿಕೆ ಪ್ರಾಂತ ಪ್ರಮುಖ್ ಕೆ.ಟಿ.ಉಲ್ಲಾಸ್ ಆಗ್ರಹಿಸಿದರು.

ಕದ್ರಿಯ ವಿಶ್ವಶ್ರೀಯಲ್ಲಿ ಮಾತನಾಡಿದ ಅವರು, ಕಳೆದ ಒಂದು ತಿಂಗಳಿನಿಂದ ರಶೀದ್ ಪದೇಪದೇ ಸುಹಾಸ್ ಶೆಟ್ಟಿಗೆ ಕರೆ ಮಾಡಿ ಹಿಂಸೆ ಕೊಡುತ್ತಿದ್ದ ಎಂದು ಆತನ ಸ್ನೇಹಿತರು ಹೇಳುತ್ತಿದ್ದಾರೆ. ಕೊಲೆಗೆ ಮೂರು ದಿನಕ್ಕೆ ಮೊದಲು ಎಸಿಪಿಯವರು ಸುಹಾಸ್ ಶೆಟ್ಟಿಯನ್ನು ಕರೆದು ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ತಿರುಗಾಡಿದ್ದಲ್ಲಿ ಕೇಸ್ ಹಾಕಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು. ಆದ್ದರಿಂದ ಆತನಲ್ಲಿ ಶಸ್ತ್ರಾಸ್ತ್ರಗಳು ಇಲ್ಲ ಎಂಬ ಸುದ್ದಿ ಕೊಲೆ ಆರೋಪಿಗಳಿಗೆ ಹೇಗೆ ಗೊತ್ತಾಗಿದೆ. ಈ ಮಾಹಿತಿ ರಶೀದ್‌ನಿಂದಲೇ ಆರೋಪಿಗಳಿಗೆ ಸಿಕ್ಕಿದೆ ಎಂದು ಅವರು ಆರೋಪಿಸಿದರು.

ಸುಹಾಸ್ ಶೆಟ್ಟಿ ಕೊಲೆ ಫಾಝಿಲ್ ಕೊಲೆಗೆ ಪ್ರತಿಕಾರವಲ್ಲ. ಇದರಲ್ಲಿ ಫಾಝಿಲ್ ತಮ್ಮ ಅದಿಲ್ ಮಾತ್ರವಲ್ಲ, ನಿಷೇಧಿತ ಪಿಎಫ್ಐ ಸಂಘಟನೆ 50ಲಕ್ಷಕ್ಕೂ ಅಧಿಕ ಹಣಕಾಸು ನೆರವು ನೀಡಿದೆ ಎಂಬ ಬಲವಾದ ಅನುಮಾನವಿದೆ. ಕೊಲೆಯ ಬಳಿಕ ಆರೋಪಿಗಳು ಯಾವ ಆತುರವಿಲ್ಲದೆ ಕಾರು ಹತ್ತಿ ಹೋಗಿದ್ದಾರೆ. ಕೊಲೆ ನಡೆದ ಸಂದರ್ಭ ಅಲ್ಲಿದ್ದವರೆಲ್ಲಾ ಇವರದ್ದೇ ಜನ ಆಗಿರಬೇಕು. ಆದ್ದರಿಂದ ಅವರಿಗೆ ಅಷ್ಟು ಆತ್ಮವಿಶ್ವಾಸ ಬಂದಿತ್ತು ಎಂದರು.

ಈ ಹಿಂದೆ ನಡೆದ ಪ್ರಶಾಂತ ಪೂಜಾರಿ, ಸುಖಾನಂದ ಶೆಟ್ಟಿ ಹತ್ಯೆಯಲ್ಲಿ ಪಿಎಫ್ಐ ಸಂಘಟನೆಯ ಕೈವಾಡವಿತ್ತು, ಹಣಕಾಸು ನೆರವು ನೀಡಿತ್ತು. ಅದೇ ರೀತಿ ಈ ಪ್ರಕರಣದಲ್ಲೂ ಪಿಎಫ್ಐನ ಕೈವಾಡವಿದೆ‌ ಬಲವಾದ ಶಂಕೆಯಿದೆ. ಈ ಪ್ರಕರಣದಲ್ಲಿ ಆರೋಪಿಗಳಾದ ರಂಜಿತ್ ಮತ್ತು ನಾಗರಾಜ್ ಇಬ್ಬರಿಗೂ ಸುಹಾಸ್ ಶೆಟ್ಟಿ ಯಾರು ಎಂದು ಗೊತ್ತಿಲ್ಲ. ಅವರಿಗೆ ಸುಹಾಸ್ ಶೆಟ್ಟಿ ಮೇಲೆ ಯಾವ ವಿರೋಧವೂ ಇಲ್ಲ. ಅಪರಾಧ ಚಟುವಟಿಕೆ ಹಿನ್ನೆಲೆಯವರೂ ಅಲ್ಲ. ಈ ಕೇಸ್‌ನಲ್ಲಿ ಹಿಂದೂಗಳು ಇರಬೇಕೆಂದು ಅವರಿಬ್ಬರನ್ನು ಬಳಸಿದ್ದಾರೆ. ಪಿಎಫ್ಐ ಬ್ಯಾನ್ ಆದ ಬಳಿಕ ಇಂತಹ ಕೃತ್ಯವನ್ನು ನೆರವಾಗಿ ಮಾಡದೇ ಹಿಂದೂಗಳಲ್ಲಿ ಮಾಡಿಸುತ್ತಿದ್ದಾರೆ. ಪ್ರಕರಣ ಎನ್ಐಎಗೆ ಹೋಗದಂತೆ ಹಿಂದೂಗಳನ್ನು ಬಳಸುತ್ತಿದ್ದಾರೆ‌. ಆದ್ದರಿಂದ ಪ್ರಕರಣದ ತನಿಖೆಯನ್ನು ಎನ್ಐಎಗೆ ಒಪ್ಪಿಸಬೇಕು ಎಂದು ಅವರು ಆಗ್ರಹಿಸಿದರು.

 

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!