ಮಂಗಳೂರು: ಹಿಂದು ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಪೊಲೀಸರ ನೇರ ಕೈವಾಡವಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತರ ಜತೆಗೆ ಬಜ್ಪೆ ಪೊಲೀಸ್ ಠಾಣೆಯ ಪೊಲೀಸರ ಸಹಕಾರದಿಂದ ಈ ಹತ್ಯೆ ನಡೆಸಲಾಗಿದೆ ಎಂದು ಗಂಭೀರ ಆರೋಪ ಮಾಡಿರುವ ಶಾಸಕ ಉಮಾನಾಥ ಕೋಟ್ಯಾನ್, ಸಮಗ್ರ ತನಿಖೆಗಾಗಿ ಪ್ರಕರಣವನ್ನು ಎನ್‌ಐಎಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಸುಹಾಸ್ ಹತ್ಯೆ ನಡೆದ ಸ್ಥಳದಲ್ಲಿ ೨೫ ಮಂದಿ ಇದ್ದು, ಆರೋಪಿಗಳಿಗೆ ರಕ್ಷಣೆ ನೀಡಿದ್ದಾರೆ. ಸುತ್ತಲೂ ಕೋಟೆ ನಿರ್ಮಾಣ ಮಾಡಿ ಸುಹಾಸ್ ಹತ್ಯೆ ನಡೆಸಲು ಬಿಟ್ಟಿದ್ದಾರೆ. ಸ್ಥಳೀಯರ ಸಹಕಾರದೊಂದಿಗೆ ಈ ಹತ್ಯೆ ನಡೆದಿದೆ. ಬುರ್ಖಾಧಾರಿ ಮಹಿಳೆಯರೂ ಆರೋಪಿಗಳನ್ನು ಪಾರು ಮಾಡಿದ್ದಾರೆ. ಹತ್ಯೆಗೂ ಮುನ್ನವೇ ಪೊಲೀಸರು ಹಾಗೂ ಆರೋಪಿಗಳ ನಡುವೆ ಒಡಂಬಡಿಕೆ ಆಗಿತ್ತು. ಆದ್ದರಿಂದಲೇ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದರೂ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಸುಹಾಸ್ ಶೆಟ್ಟಿ ಅವರ ರಕ್ಷಣೆಗೆ ಮುಂದಾಗಿಲ್ಲ. ಒಡಂಬಡಿಕೆಯ ಭಾಗವಾಗಿ ಪೊಲೀಸರು ನಡೆದುಕೊಂಡಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಆರೋಪಿಸಿದರು.
ಜಿಲ್ಲೆಗೆ ಆಗಮಿಸಿದ ಗೃಹ ಸಚಿವರು, ಉಸ್ತುವಾರಿ ಸಚಿವರು ಸ್ಥಳೀಯ ಶಾಸಕರನ್ನು ಸಭೆಗೆ ಆಹ್ವಾನಿಸಿಲ್ಲ. ಆದರೆ, ಮುಸ್ಲಿಂ ಮುಖಂಡರ ಜತೆ ಸಭೆ ನಡೆಸಿದ್ದಾರೆ. ಹತ್ಯೆಯಾದ ಸುಹಾಸ್ ಶೆಟ್ಟಿ ಮನೆಗೂ ತೆರಳಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಜ್ಪೆಯಲ್ಲಿ ಹಿಂದುವಿನ ಕೊಲೆ ಆಗಿದೆ. ಆದರೆ, ಪೊಲೀಸರು ರಾತ್ರಿ ವೇಳೆ ಮಹಿಳೆಯರು ಇರುವ ಹಿಂದುಗಳ ಮನೆ ಮೇಲೆಯೇ ದಾಳಿ ನಡೆಸಿ ಬೆದರಿಸುತ್ತಿದ್ದಾರೆ. ಮೂಡುಶೆಡ್ಡೆಯಲ್ಲಿ ಪ್ರದೀಪ್ ಎಂಬವರ ಮನೆಗೆ , ಕಳವಾರಿನ ಮನೆಯೊಂದಕ್ಕೆ ರಾತ್ರಿ ಪೊಲೀಸರು ತೆರಳಿದ್ದಾರೆ. ಯಾವ ಮುಸಲ್ಮಾನರ ಮನೆಗೂ ಪೊಲೀಸರು ರಾತ್ರಿ ಹೋಗಿಲ್ಲ ಎಂದರು.
ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ರೌಡಿಶೀಟರ್ ಎಂದು ಆರೋಪಿಸಲಾಗುತ್ತಿದೆ. ಒಂದು ಪ್ರಕರಣವಿದ್ದರೂ ಪೊಲೀಸರು ರೌಡಿಶೀಟರ್ ಹಾಕುತ್ತಾರೆ. ಹಾಗಿದ್ದಲ್ಲಿ ರೌಡಿಶೀಟರ್‌ನನ್ನು ಕೊಲ್ಲಲು ಪೊಲೀಸರು ರೌಡಿಗಳನ್ನು ಕಳುಹಿಸಬಹುದೇ ಎಂದು ಪ್ರಶ್ನಿಸಿದರು.
ಸ್ಪೀಕರ್ ಸ್ಥಾನದಲ್ಲಿದ್ದವರು ರಾಜಕೀಯ ಮಾಡಬಾರದು. ಆದರೆ, ಯು.ಟಿ. ಖಾದರ್ ಅವರು ಸದಾ ಸುದ್ದಿಗೋಷ್ಠಿ ನಡೆಸುತ್ತಿರುತ್ತಾರೆ. -ಝಿಲ್ ಕುಟುಂಬದ ಪರವಾಗಿ ಮಾತನಾಡಿದ ಖಾದರ್, -ಝಿಲ್ ಸಹೋದರ ಆರೋಪಿಯಾದ ಬಳಿಕ ಏನು ಹೇಳುತ್ತಾರೆ? ಎಂದರು.ಶಾಸಕ ಹರೀಶ್ ಪೂಂಜ ಅವರ ಶಾಸಕ ಸ್ಥಾನ ಅನರ್ಹತೆಗೆ ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಅವರ ಮೇಲೆ ವಿನಾಕಾರಣ ಪ್ರಕರಣ ದಾಖಲಿಸಲಾಗುತ್ತಿದೆ. ಪೂಂಜ ಅವರನ್ನು ಅನರ್ಹಗೊಳಿಸಿ ನೋಡಲಿ ಎಂದರು.
ಬಜ್ಪೆ ಬಳಿಯ -ಪ್ಲ್ಯಾಟ್‌ವೊಂದರಲ್ಲಿ ಹತ್ಯೆ ಪ್ರಕರಣದ ಆರೋಪಿಗಳು ವಾಸಿಸುತ್ತಿದ್ದಾರೆ. ಪ್ರಶಾಂತ್, ಸುಖಾನಂದ ಶೆಟ್ಟಿ ಹತ್ಯೆ ಆರೋಪಿಗಳು ಇದೇ -ಟ್‌ನಲ್ಲಿ ಇದ್ದರು. ಸುಹಾಸ್ ಕೊಲೆ ಆರೋಪಿಗಳು ಕೊಲೆಗೂ ಮುನ್ನ ವ್ಯವಸ್ಥಿತ ಯೋಜನೆ ರೂಪಿಸಿ ಇದೇ -ಟ್‌ನಿಂದ ತೆರಳಿದ್ದಾರೆ. ಪೊಲೀಸರು ಇದುವರೆಗೆ ಈ -ಟ್‌ಗೆ ತೆರಳಿ ಪರಿಶೀಲನೆ ನಡೆಸಿಲ್ಲ ಎಂದು ಆರೋಪಿಸಿದ ಅವರು, ಮಂಗಳೂರು ನಗರ ಪೊಲೀಸ್ ಆಯುಕ್ತರಂತಹ ಅಽಕಾರಿಯನ್ನು ನಾನು ಇದುವರೆಗೆ ನೋಡಿಲ್ಲ. ಎಲ್ಲದರಲ್ಲೂ ಅವರು ಡೀಲಿಂಗ್ ನಡೆಸುತ್ತಿದ್ದಾರೆ. ಮರಳುಗಾರಿಕೆ, ಇಸ್ಪೀಟ್, ಸಿಂಗಲ್ ನಂಬರ್ ಗೇಮ್ ಅವ್ಯಾಹತವಾಗಿ ನಡೆಯುತ್ತಿದೆ. ಕಮಿಷನರ್‌ಗೆ ಹಣ ನೀಡಬೇಕು ಎಂದು ಸಾಮಾನ್ಯ ಪೇದೆಯೂ ಹೇಳುತ್ತಿದ್ದಾರೆ ಎಂದರು.
ಸುಹಾಸ್ ಶೆಟ್ಟಿ ಅವರು ಆತ್ಮರಕ್ಷಣೆಗಾಗಿ ತನ್ನ ವಾಹನದಲ್ಲಿ ಇರಿಸಿಕೊಂಡಿದ್ದ ಆಯುಧಗಳನ್ನು ಪೊಲೀಸರು ಒತ್ತಾಯಪೂರ್ವಕವಾಗಿ ತೆಗೆಸಿದ್ದರು. ಪೊಲೀಸರ ಸಹಕಾರದಿಂದಲೇ ಈ ಕೊಲೆ ಆಗಿದೆ. ಆರೋಪಿಗಳನ್ನು ಪೊಲೀಸರು ಹಿಡಿದಿಲ್ಲ. ಒಡಂಬಡಿಕೆಯ ಭಾಗವಾಗಿ ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಬಂಧನವಾದ ಬಳಿಕ ಪೊಲೀಸರು ಆರೋಪಿಗಳ ಮೈಮುಟ್ಟಿಲ್ಲ. ಸುಹಾಸ್ ಹತ್ಯೆಗೆ -ಝಿಲ್ ಸಹೋದರ ಐದು ಲಕ್ಷ ರೂ. ನೀಡಿದ್ದ ಎಂದು ಹೇಳಲಾಗಿದೆ. ಆದರೆ, ದುಬೈನಿಂದ ೫೦ ಲಕ್ಷ ರೂ. ಹಣ ನೀಡಲಾಗಿದೆ ಎಂದು ಉಮಾನಾಥ ಕೋಟ್ಯಾನ್ ಆಪಾದಿಸಿದರು.
ಬಜ್ಪೆ, ಸುರತ್ಕಲ್, ಪಣಂಬೂರು ಪೊಲೀಸ್ ಠಾಣೆಯ ಕೆಲ ಪೊಲೀಸರ ಮೊಬೈಲ್ ಕರೆಗಳನ್ನು ಪರಿಶೀಲಿಸಿದರೆ ಈ ಕೊಲೆಗೆ ಪೊಲೀಸರ ಸಹಕಾರ ಹಾಗೂ ಕೊಲೆ ಹಿಂದೆ ಯಾರಿದ್ದಾರೆ ಎಂಬುದು ಬಹಿರಂಗವಾಗಲಿದೆ ಎಂದು ಹೇಳಿದರು.ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಶಾಂತಿಪ್ರಸಾದ್ ಹೆಗ್ಡೆ, ಮುಖಂಡರಾದ ಈಶ್ವರ ಕಟೀಲ್, ದಿನೇಶ್, ರಂಜಿತ್, ರಾಜೇಶ್, ವಿಜಯ್, ಅರುಣ್ ಶೇಟ್ ಉಪಸ್ಥಿತರಿದ್ದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್‌ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್‌ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…