ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆ ಮದ್ಯ

ರಾಜ್ಯದಲ್ಲಿ ಬಿಯರ್​ ಬೆಲೆ ಹೆಚ್ಚಿದ ಬೆನ್ನಲ್ಲೇ ಇದೀಗ ವಿಸ್ಕಿ, ರಮ್, ಜಿನ್, ವೋಡ್ಕಾ ಬೆಲೆ ಏರಿಕೆಗೆ ರಾಜ್ಯ ಸರ್ಕಾರದ ಮುಂದಾಗಿದೆ.

ಐಎಂಎಲ್ ಮೇಲಿನ ದರ ಏರಿಕೆ ಆಗಲಿದ್ದು, ಮೂರನೇ ಬಾರಿ ಮದ್ಯ ದರ ಹೆಚ್ಚಳವಾಗಲಿದೆ. ಈ ವಾರದಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ ಎಂದು ವರದಿ ಆಗಿದೆ.

2024-25 ನೇ ಸಾಲಿನಲ್ಲಿ ರಾಜ್ಯ ಸರ್ಕಾರ ಅಬಕಾರಿ ಇಲಾಖೆಗೆ ಬರೋಬ್ಬರಿ 38,600 ಕೋಟಿ ರುಪಾಯಿ ಟಾರ್ಗೆಟ್ ನೀಡಿತ್ತು. ಈ ಬಾರಿಯ ಬಜೆಟ್‌ ನಲ್ಲಿ 40 ಸಾವಿರ ಕೋಟಿ ಟಾರ್ಗೆಟ್ ನೀಡಲಾಗಿದೆ. ಈ ಟಾರ್ಗೆಟ್ ಮುಟ್ಟುವ ಸಲುವಾಗಿ ಅಬಕಾರಿ ಇಲಾಖೆ ಮತ್ತೆ ದರ ಹೆಚ್ಚಳ ಮಾಡಲು ಮುಂದಾಗಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ.

ಈ ವಾರದಿಂದಲೇ ಎಲ್ಲಾ ರೀತಿಯ ಮದ್ಯಗಳ ಮೇಲೆ ಶೇ 10 ರಷ್ಟು ಬೆಲೆ ಏರಿಕೆ ಆಗಲಿದೆ. ಈಗಾಗಲೇ ದರ ಏರಿಕೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಕೂಡ ನೀಡಿದ್ದು, ದರ ಏರಿಕೆ ಫಿಕ್ಸ್ ಆಗಿದೆ. ಮದ್ಯಪ್ರಿಯರು ಮದ್ಯ ಕುಡಿಯಲು ಹೆಚ್ಚು ಹಣ ನೀಡಲೇಬೇಕಿದೆ.

ಮದ್ಯದ 16 ಸ್ಲ್ಯಾಬ್​ಗಳಲ್ಲಿ 1 ರಿಂದ 4 ಸ್ಲ್ಯಾಬ್​ಗಳ ಮೇಲೆ ದರ ಏರಿಕೆ ಏರಿಕೆ ಮಾಡಲು ಅಬಕಾರಿ ಇಲಾಖೆ ಮುಂದಾಗಿದ್ದು, ಸ್ಯ್ಲಾಬ್-1, ಸದ್ಯ 80 ರೂಪಾಯಿ ಇದ್ದು ಅದರ ಮೇಲೆ 10 ರೂಪಾಯಿ ಏರಿಕೆ ಆಗಲಿದೆ. ಸ್ಲ್ಯಾಬ್- 2, 155 ರೂಪಾಯಿ ಇದ್ದು ಅದರ ಮೇಲೆ 15 ರೂಪಾಯಿ ಏರಿಕೆ ಆಗಲಿದೆ.

ಒಂದು ಕ್ವಾರ್ಟರ್ ಮೇಲೆ 10 ರಿಂದ 25 ರೂಪಾಯಿವರೆಗೆ ದರ ಏರಿಕೆ ಮಾಡಲು ಅಬಕಾರಿ ಇಲಾಖೆ ಮುಂದಾಗಿದೆ. ಒಂದು ಫುಲ್ ಬಾಟಲ್ ಮೇಲೆ 50 ರಿಂದ 100 ರುಪಾಯಿ ವರೆಗೆ ಏರಿಕೆ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಈ ವರ್ಷ ಬಹುತೇಕ ಎಲ್ಲಾ ವಸ್ತುಗಳ ಬೆಲೆ ಕೂಡ ಏರಿಕೆ ಆಗಿದೆ. ಇರದ ಜೊತೆಗೆ ಮದ್ಯ ಪ್ರಿಯರು ಸರ್ಕಾರದ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದರು. ಅಬಕಾರಿ ಇಲಾಖೆ ಸರ್ಕಾರ ಕೊಟ್ಟ ಟಾರ್ಗೆಟ್ ರೀಚ್​ ಮಾಡಲು ಈ ರೀತಿ ಪದೇ ಪದೇ ಮದ್ಯದ ಬೆಲೆ ಏರಿಕೆ ಮಾಡುವುದು ಸರಿಯಲ್ಲ ಎಂದು ಮದ್ಯಪ್ರಿಯರು ಆಕ್ರೋಶ ಹೊರಹಾಕಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!