ರಾಜ್ಯದಲ್ಲಿ ಬಿಯರ್ ಬೆಲೆ ಹೆಚ್ಚಿದ ಬೆನ್ನಲ್ಲೇ ಇದೀಗ ವಿಸ್ಕಿ, ರಮ್, ಜಿನ್, ವೋಡ್ಕಾ ಬೆಲೆ ಏರಿಕೆಗೆ ರಾಜ್ಯ ಸರ್ಕಾರದ ಮುಂದಾಗಿದೆ.
ಐಎಂಎಲ್ ಮೇಲಿನ ದರ ಏರಿಕೆ ಆಗಲಿದ್ದು, ಮೂರನೇ ಬಾರಿ ಮದ್ಯ ದರ ಹೆಚ್ಚಳವಾಗಲಿದೆ. ಈ ವಾರದಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ ಎಂದು ವರದಿ ಆಗಿದೆ.
2024-25 ನೇ ಸಾಲಿನಲ್ಲಿ ರಾಜ್ಯ ಸರ್ಕಾರ ಅಬಕಾರಿ ಇಲಾಖೆಗೆ ಬರೋಬ್ಬರಿ 38,600 ಕೋಟಿ ರುಪಾಯಿ ಟಾರ್ಗೆಟ್ ನೀಡಿತ್ತು. ಈ ಬಾರಿಯ ಬಜೆಟ್ ನಲ್ಲಿ 40 ಸಾವಿರ ಕೋಟಿ ಟಾರ್ಗೆಟ್ ನೀಡಲಾಗಿದೆ. ಈ ಟಾರ್ಗೆಟ್ ಮುಟ್ಟುವ ಸಲುವಾಗಿ ಅಬಕಾರಿ ಇಲಾಖೆ ಮತ್ತೆ ದರ ಹೆಚ್ಚಳ ಮಾಡಲು ಮುಂದಾಗಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ.
ಈ ವಾರದಿಂದಲೇ ಎಲ್ಲಾ ರೀತಿಯ ಮದ್ಯಗಳ ಮೇಲೆ ಶೇ 10 ರಷ್ಟು ಬೆಲೆ ಏರಿಕೆ ಆಗಲಿದೆ. ಈಗಾಗಲೇ ದರ ಏರಿಕೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಕೂಡ ನೀಡಿದ್ದು, ದರ ಏರಿಕೆ ಫಿಕ್ಸ್ ಆಗಿದೆ. ಮದ್ಯಪ್ರಿಯರು ಮದ್ಯ ಕುಡಿಯಲು ಹೆಚ್ಚು ಹಣ ನೀಡಲೇಬೇಕಿದೆ.
ಮದ್ಯದ 16 ಸ್ಲ್ಯಾಬ್ಗಳಲ್ಲಿ 1 ರಿಂದ 4 ಸ್ಲ್ಯಾಬ್ಗಳ ಮೇಲೆ ದರ ಏರಿಕೆ ಏರಿಕೆ ಮಾಡಲು ಅಬಕಾರಿ ಇಲಾಖೆ ಮುಂದಾಗಿದ್ದು, ಸ್ಯ್ಲಾಬ್-1, ಸದ್ಯ 80 ರೂಪಾಯಿ ಇದ್ದು ಅದರ ಮೇಲೆ 10 ರೂಪಾಯಿ ಏರಿಕೆ ಆಗಲಿದೆ. ಸ್ಲ್ಯಾಬ್- 2, 155 ರೂಪಾಯಿ ಇದ್ದು ಅದರ ಮೇಲೆ 15 ರೂಪಾಯಿ ಏರಿಕೆ ಆಗಲಿದೆ.
ಒಂದು ಕ್ವಾರ್ಟರ್ ಮೇಲೆ 10 ರಿಂದ 25 ರೂಪಾಯಿವರೆಗೆ ದರ ಏರಿಕೆ ಮಾಡಲು ಅಬಕಾರಿ ಇಲಾಖೆ ಮುಂದಾಗಿದೆ. ಒಂದು ಫುಲ್ ಬಾಟಲ್ ಮೇಲೆ 50 ರಿಂದ 100 ರುಪಾಯಿ ವರೆಗೆ ಏರಿಕೆ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಈ ವರ್ಷ ಬಹುತೇಕ ಎಲ್ಲಾ ವಸ್ತುಗಳ ಬೆಲೆ ಕೂಡ ಏರಿಕೆ ಆಗಿದೆ. ಇರದ ಜೊತೆಗೆ ಮದ್ಯ ಪ್ರಿಯರು ಸರ್ಕಾರದ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದರು. ಅಬಕಾರಿ ಇಲಾಖೆ ಸರ್ಕಾರ ಕೊಟ್ಟ ಟಾರ್ಗೆಟ್ ರೀಚ್ ಮಾಡಲು ಈ ರೀತಿ ಪದೇ ಪದೇ ಮದ್ಯದ ಬೆಲೆ ಏರಿಕೆ ಮಾಡುವುದು ಸರಿಯಲ್ಲ ಎಂದು ಮದ್ಯಪ್ರಿಯರು ಆಕ್ರೋಶ ಹೊರಹಾಕಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…