ತೆಂಗಿನಕಾಯಿ ಕೀಳಲು ತೆಂಗಿನ ಮರಕ್ಕೆ ಹತ್ತಿದ್ದ ವ್ಯಕ್ತಿಯೊಬ್ಬರು ಆಯ ತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತಪಟ್ಟವರನ್ನು ಕಡಬ ತಾಲೂಕು ಬಲ್ಯ ಗ್ರಾಮದ ಪಲ್ಲತಡ್ಕ ನಿವಾಸಿ ದಿ|ಐತ್ತಪ್ಪ ಪೂಜಾರಿ ಅವರ ಪುತ್ರ ಉಮೇಶ್ (46) ಎಂದು ಗುರುತಿಸಲಾಗಿದೆ. ಇವರು ತನ್ನ ಮನೆಯ ತೋಟದಲ್ಲಿ ತೆಂಗಿನ ಮರಕ್ಕೆ ಹತ್ತಿದ್ದರು. ಕೆಳಕ್ಕೆ ಬಿದ್ದು ಗಂಭೀರಗಾಯ ಗೊಂಡಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ, ಪುತ್ರಿ ಹಾಗೂ ಪುತ್ರ ಇದ್ದಾರೆ. ಕೂಲಿ ಕಾರ್ಮಿಕನಾಗಿದ್ದುಕೊಂಡು ಸಾಮಾಜಿಕ ಕೆಲಸಗಳಲ್ಲಿ ಸಕ್ರೀಯನಾಗಿದ್ದ ಉಮೇಶ್ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದೇರಾಜೆ ಒಕ್ಕೂಟದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.



