ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ಕರಿಛಾಯೆ ಜೋರಾಗುತ್ತಿದ್ದು, ಹೀಗಾಗಿ ಮೊನ್ನೆ ಪಂಜಾಬ್ ಗಡಿಯಲ್ಲಿ ಸೇನೆ ಮಾಕ್ ಡ್ರಿಲ್ ಮಾಡಿದಂತೆ ದೇಶಾದ್ಯಂತ ಮಾಕ್ ಡ್ರಿಲ್ ಮಾಡಲು ಸರ್ಕಾರ ಆಜ್ಞೆ ಹೊರಡಿಸಿದೆ. ಜಿಲ್ಲೆಗಳಿಂದ ಹಳ್ಳಿವರೆಗೂ ಈ ಕವಾಯತು ನಡೆಸಲು ಸೂಚಿಸಲಾಗಿದೆ.
ನಾಗರಿಕರ ರಕ್ಷಣೆ ಸಂಬಂಧ ನಾಳೆ ದೇಶಾದ್ಯಂತ ಅಣಕು ಪ್ರದರ್ಶನ ಮಾಡಿಸಲು ಸೂಚಿಸಿದೆ. ಎಲ್ಲಾ ರಾಜ್ಯಗಳಲ್ಲಿ ವಾಯುದಾಳಿಯ ಸೈರನ್ ವ್ಯವಸ್ಥೆ ಇರುವಂತೆ ನೋಡಿಕೊಳ್ಳಿ ಎಂದು ಸೂಚಿಸಿದೆ. ದೇಶದ 244 ವರ್ಗೀಕೃತ ಜಿಲ್ಲೆಗಳಿಂದ ಗ್ರಾಮ ಮಟ್ಟದವರೆಗೂ ಮಾಕ್ ಡ್ರಿಲ್ ಆಯೋಜಿಸಲು ಕೇಂದ್ರ ಆಜ್ಞೆ ಹೊರಡಿಸಿದೆ.
ಸದ್ಯದ ಮಾಹಿತಿ ಪ್ರಕಾರ, ಜಮ್ಮು-ಕಾಶ್ಮೀರ, ಪಂಜಾಬ್, ಹರಿಯಾಣ ಸೇರಿದಂತೆ ಪಾಕಿಸ್ತಾನದ ಜೊತೆ ಗಡಿ ಹಂಚಿಕೊಂಡಿರುವ ರಾಜ್ಯಗಳ ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ನಡೆಯಲಿದೆ. ಅದರ ಜೊತೆಗೆ ದೇಶದ ಪ್ರಮುಖ ವಾಣಿಜ್ಯ ನಗರ ಮತ್ತು ನೌಕಾನೆಲೆ, ಸ್ಥಾವರಗಳನ್ನು ಹೊಂದಿರುವ ಜಿಲ್ಲೆಗಳಲ್ಲೂ ಯುದ್ಧ ಕವಾಯತು ನಡೆಯುವ ಸಾಧ್ಯತೆ ಇದೆ.
ರಾಜ್ಯದ ವಿಚಾರಕ್ಕೆ ಬಂದಾಗ ಮೂರು ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ಸಾಧ್ಯತೆ ಇದೆ. ಕರ್ನಾಟಕದ ರಾಯಚೂರು, ಕಾರವಾರ ಮತ್ತು ಬೆಂಗಳೂರಿನಲ್ಲಿ ಮಾಕ್ ಡ್ರಿಲ್ ಸಾಧ್ಯತೆ ಇದೆ. ರಾಯಚೂರಲ್ಲಿ ಥರ್ಮಲ್ ಪವರ್ ಪ್ಲಾಂಟ್ ಇರುವ ಹಿನ್ನೆಲೆಯಲ್ಲಿ ಡ್ರಿಲ್ ನಡೆಯುವ ಸಾಧ್ಯತೆ ಇದೆ. ಇನ್ನು, ಬೆಂಗಳೂರಲ್ಲೂ ಯುದ್ಧ ಕವಾಯತು ನಿರೀಕ್ಷೆ ಮಾಡಲಾಗಿದೆ. ಬೆಂಗಳೂರು ಭಾರತದ ಸಿಲಿಕಾನ್ ವ್ಯಾಲಿ. ದೇಶದ ಪ್ರಮುಖ ವಾಣಿಜ್ಯ ಚಟುವಟಿಕೆಗಳ ಮೂಲವೇ ಬೆಂಗಳೂರು. ಕಾರವಾರದಲ್ಲಿ ನೌಕಾನೆಲೆ ಇರುವುದರಿಂದ ಮ್ಯಾಕ್ ಡ್ರಿಲ್ ಅವಶ್ಯಕತೆ ಇದೆ ಎಂದು ಕೇಂದ್ರ ಚಿಂತಿಸಿದೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…