ಅಪಘಾತ ಸಂಭವಿಸಿದಾಗ ಗಾಯಾಳುಗಳನ್ನು ರಕ್ಷಣೆ ಮಾಡುವುದು ಬಹಳ ಮುಖ್ಯ. ದೇಶದಲ್ಲಿ ರಸ್ತೆ ಅಪಘಾತದ ಗಾಯಾಳುಗಳ ಜೀವ ಉಳಿಸಲು ಕೇಂದ್ರ ಸರ್ಕಾರ ಮಹತ್ವದ ಯೋಜನೆ ಜಾರಿಗೊಳಿಸಿದೆ.

ಕೇಂದ್ರ ಸರ್ಕಾರ ಅಪಘಾತದ ಗಾಯಾಳುಗಳಿಗೆ ಕ್ಯಾಶ್ ಲೆಸ್ ಚಿಕಿತ್ಸೆ ನೀಡುವ ಯೋಜನೆಯನ್ನು ಜಾರಿಗೊಳಿಸಿದೆ. ಕೇಂದ್ರದ ಹೆದ್ದಾರಿ, ಭೂ ಸಾರಿಗೆ ಇಲಾಖೆ ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, ಇಂದಿನಿಂದಲೇ ರಸ್ತೆ ಅಪಘಾತದ ಸಂತ್ರಸ್ತರು ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ.
ಸುಪ್ರೀಂಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರ ಈ ಯೋಜನೆಯನ್ನ ಜಾರಿಗೊಳಿಸಿದೆ. ಕೇಂದ್ರ ಸರ್ಕಾರ ಗುರುತಿಸಿದ ಆಸ್ಪತ್ರೆಗಳಲ್ಲಿ ಗಾಯಾಳುಗಳಿಗೆ ಅಪಘಾತದ ದಿನದಿಂದ 7 ದಿನಗಳವರೆಗೆ 1.5 ಲಕ್ಷ ರೂಪಾಯಿವರೆಗೆ ಕ್ಯಾಶ್ ಲೆಸ್ ಚಿಕಿತ್ಸೆ ನೀಡಲಾಗುತ್ತದೆ.
ನಿನ್ನೆಯಿಂದಲೇ ದೇಶಾದ್ಯಂತ ಈ ಯೋಜನೆ ಜಾರಿಯಾಗಿದೆ ಎಂದು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ರಸ್ತೆ ಅಪಘಾತದ ಸಂತ್ರಸ್ತರು ಕೇಂದ್ರ ಸರ್ಕಾರ ಗುರುತಿಸಿದ ಆಸ್ಪತ್ರೆಗಳಲ್ಲಿ ಉಚಿತವಾದ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಕೇಂದ್ರದ ಹೆದ್ದಾರಿ, ಭೂ ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.



