ಈ ಬಾರಿ ಐಪಿಎಲ್‌ನ ಪ್ಲೇ-ಆಫ್ ರೇಸ್‌ನಲ್ಲಿ ಮುಂಚೂಣಿಯಲ್ಲಿರುವ ಎರಡು ತಂಡಗಳಾದ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ಮಂಗಳವಾರ ಪರಸ್ಪರ ಸೆಣಸಾಡಲಿವೆ. ಈ ಪಂದ್ಯದಲ್ಲಿ ಗೆಲ್ಲುವ ತಂಡದ ಪ್ಲೇ-ಆಫ್ ಸ್ಥಾನ ಬಹುತೇಕ ಖಚಿತವಾಗಲಿದೆ.
ಸದ್ಯ ಮುಂಬೈ ತಂಡ ಆಡಿರುವ 11ರಲ್ಲಿ 7 ಪಂದ್ಯ ಗೆದ್ದಿದ್ದರೆ, ಗುಜರಾತ್ 10 ಪಂದ್ಯಗಳಲ್ಲಿ 7 ಗೆಲುವು ದಾಖಲಿಸಿದೆ. 5 ಬಾರಿ ಚಾಂಪಿಯನ್ ಮುಂಬೈ ತಂಡಕ್ಕೆ ಉಳಿದ 3ರಲ್ಲಿ 2 ಪಂದ್ಯ ಗೆದ್ದರೆ ಅಧಿಕೃತವಾಗಿ ನಾಕೌಟ್‌ಗೇರಲಿದೆ. ಒಂದರಲ್ಲಿ ಗೆದ್ದರೂ ತಂಡಕ್ಕೆ ನಾಕೌಟ್ ರೇಸ್‌ನಲ್ಲಿ ಉಳಿದುಕೊಳ್ಳಲಿದೆ. ಈ ಬಾರಿ ತವರಿನಲ್ಲಿ ಆಡಿರುವ 5 ಪಂದ್ಯಗಳ ಪೈಕಿ 4ರಲ್ಲಿ ಗೆದ್ದಿರುವ ತಂಡ, ವಾಂಖೆಡೆಯಲ್ಲಿ ಇನ್ನೂ 2 ಪಂದ್ಯ ಆಡಬೇಕಿದೆ. ಹೀಗಾಗಿ ತಂಡ ಪ್ಲೇ-ಆಫ್‌ಗೇರುವ ಸಾಧ್ಯತೆ ಹೆಚ್ಚಿದೆ.
ಮತ್ತೊಂದೆಡೆ ಗುಜರಾತ್‌ಗೆ ಇನ್ನು 4 ಪಂದ್ಯ ಬಾಕಿಯಿದೆ. ಇದರಲ್ಲಿ 2 ಪಂದ್ಯಗಳನ್ನು ತವರಿನಲ್ಲಿ ಆಡಲಿದೆ. ಮುಂಬೈ ವಿರುದ್ಧ ಅದರದೇ ತವರಿನಲ್ಲಿ ಗೆಲ್ಲುವ ಮೂಲಕ ಪ್ಲೇ-ಆಫ್ ಹಾದಿಯನ್ನು ಮತ್ತಷ್ಟು ಸುಗಮಗೊಳಿಸುವುದು ತಂಡದ ಗುರಿ. ಅಲ್ಲದೆ, ಮುಂಬೈ ವಿರುದ್ಧ ಈ ಬಾರಿ ಮೊದಲ ಮುಖಾಮುಖಿಯಲ್ಲಿ ಗೆದ್ದಿದ್ದ ಗುಜರಾತ್, ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…