ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ಪಾಕ್ ಪ್ರಜೆಗಳ ತೆರವಿಗೆ ಒತ್ತಾಯಿಸಿ ಬಿಜಿಪಿ ಸಹಿ ಅಭಿಯಾನ

ರಾಜ್ಯದಲ್ಲಿನ ಪಾಕಿಸ್ತಾನಿ ಪ್ರಜೆಗಳನ್ನು ರಾಜ್ಯದಿಂದ ಕೂಡಲೇ ತೆರವುಗೊಳಿಸುವ ಸಂಬಂಧ ಪ್ರತಿಪಕ್ಷ ಬಿಜೆಪಿ ಸಹಿ ಸಂಗ್ರಹ ಅಭಿಯಾನ ಆರಂಭಿಸಿದೆ.

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಸೋಮವಾರ ಪಕ್ಷದ ಕಚೇರಿ ಬಳಿ ಈ ಅಭಿಯಾನಕ್ಕೆ ಚಾಲನೆ ನೀಡಿದರು. ಬಳಿಕ ಕರಂದ್ಲಾಜೆ ಅವರು ಮಲ್ಲೇಶ್ವರದಲ್ಲಿ ಕೆಲಕಾಲ ಖುದ್ದಾಗಿ ಪಕ್ಷದ ಇತರ ಮುಖಂಡರೊಂದಿಗೆ ಬೀದಿಗಳಲ್ಲಿ ಸಂಚರಿಸಿ ರಾಜ್ಯದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ಕೂಡಲೇ ತೆರವು ಮಾಡುವಂತೆ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಒತ್ತಾಯಿಸುವ ಮನವಿ ಪತ್ರಕ್ಕೆ ಸಾರ್ವಜನಿಕರಿಂದ ಸಹಿ ಸಂಗ್ರಹಿಸಿದರು.

ಈ ವೇಳೆ ಮಾತನಾಡಿದ ಬಿಜೆಪಿಯ ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್. ದತ್ತಾತ್ರಿ ಮಾತನಾಡಿ, ಬಿಜೆಪಿ ರಾಜ್ಯ ಸರ್ಕಾರ ಇರುವಲ್ಲಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಕರ್ನಾಟಕದಲ್ಲೂ ಕೂಡ ಪ್ರತಿ ಜಿಲ್ಲೆಯಲ್ಲಿ ನೂರಾರು ಪಾಕಿಸ್ತಾನಿ ನಿವಾಸಿಗಳಿದ್ದಾರೆ ಎಂದು ತಿಳಿಸಿದರು.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ್ ಖಾಸಲೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

error: Content is protected !!