ಜನ ಮನದ ನಾಡಿ ಮಿಡಿತ

Advertisement

ದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಅಪರಾಧಿ; ರೆಡ್ಡಿ ಜೈಲು ಸೇರೋದು ಫಿಕ್ಸ್

ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿದೆ. ಓಬಳಾಪುರಂ ಮೈನಿಂಗ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕನಾಗಿದ್ದ ಬಿ.ವಿ.ಶ್ರೀನಿವಾಸರೆಡ್ಡಿ ಮತ್ತು ಮುಖ್ಯಸ್ಥನಾಗಿದ್ದ ಜನಾರ್ದನ ರೆಡ್ಡಿ ಅಪರಾಧಿ ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ನ್ಯಾಯಾಲಯ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈ ಮೂಲಕ ಗಾಲಿ ಜನಾರ್ದನ ರೆಡ್ಡಿ ಅವರ ಶಾಸಕ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಇನ್ನು, ಇದೇ ಪ್ರಕರಣದಲ್ಲಿ ವಿ.ಡಿ.ರಾಜಗೋಪಾಲ್, ದಿ. ರಾವ್ ಲಿಂಗಾರೆಡ್ಡಿ, ಕೆ.ಮೆಹಫೂಸ್ ಅಲಿ ಖಾನ್, ಬಿವಿ ಶ್ರೀನಿವಾಸ್ ರೆಡ್ಡಿ ಮತ್ತು ಓಎಂಸಿ ಕಂಪನಿ ಕೂಡ ಅಪರಾಧಿ ಎಂದು ಕೋರ್ಟ್​​ ತೀರ್ಪು ನೀಡಿದೆ. ಈ ಅಪರಾಧವು ಐಪಿಸಿಯ ಸೆಕ್ಷನ್ 120B ಜೊತೆಗೆ 420, 409, 468, 471 ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 13 (2) ಜೊತೆಗೆ 13 (1)(d) ಅಡಿಯಲ್ಲಿ ಸಾಬೀತಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!