ಪಾಕಿಸ್ತಾನಿ ಪ್ರಜೆಯೊಬ್ಬನನ್ನು ಭಾರತೀಯ ಭದ್ರತಾ ಪಡೆಗಳು ಬಂಧಿಸಿವೆ. ಕಾಶ್ಮೀರದ ಪೂಂಚ್ ವಲಯದ ನಿಯಂತ್ರಣ ರೇಖೆಯ ಬಳಿ ಭಾರತೀಯ ಸೇನೆಯು ಪಾಕಿಸ್ತಾನಿ ಪ್ರಜೆಯೊಬ್ಬನನ್ನು ಬಂಧಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಇದಕ್ಕೂ ಮೊದಲು, ಪಾಕಿಸ್ತಾನದ ಗಡಿಯನ್ನು ಅಜಾಗರೂಕತೆಯಿಂದ ದಾಟಿದ್ದಕ್ಕಾಗಿ ಬಿಎಸ್‌ಎಫ್ ಕಾನ್‌ಸ್ಟೆಬಲ್‌ನನ್ನು ಪಾಕಿಸ್ತಾನ ವಶಕ್ಕೆ ಪಡೆದ ಕೆಲವು ದಿನಗಳ ನಂತರ, ರಾಜಸ್ಥಾನದಲ್ಲಿ ಪಾಕಿಸ್ತಾನಿ ರೇಂಜರ್‌ನನ್ನು ಬಂಧಿಸಲಾಗಿತ್ತು.
ಏಪ್ರಿಲ್‌ನಲ್ಲಿ, ತಪ್ಪಾಗಿ ಗಡಿ ದಾಟಿ ಪಾಕಿಸ್ತಾನಕ್ಕೆ ಪ್ರವೇಶಿಸಿದ್ದ ಬಿಎಸ್‌ಎಫ್ ಕಾನ್‌ಸ್ಟೆಬಲ್ ಪೂರ್ಣಮ್ ಕುಮಾರ್ ಶಾ ಅವರನ್ನು ಪಾಕಿಸ್ತಾನ ವಶಕ್ಕೆ ಪಡೆದುಕೊಂಡಿದೆ. ಹಲವಾರು ಸುತ್ತಿನ ಮಾತುಕತೆ ಬಳಿಕೂ ಪಾಕಿಸ್ತಾನ ಯೋಧನನ್ನು ಬಿಡುಗಡೆ ಮಾಡಲು ಒಪ್ಪಿಗೆ ನೀಡಿಲ್ಲ. ಪಂಜಾಬ್‌ನ ಫಿರೋಜ್‌ಪುರ ಸೆಕ್ಟರ್‌ನಲ್ಲಿ ಬಿಎಸ್‌ಎಫ್ ಜವಾನ್ ಪಿ.ಕೆ ಸಿಂಗ್ ಆಕಸ್ಮಿಕವಾಗಿ ಗಡಿ ದಾಟಿದ್ದರು. ಭಾರತದ ಗಡಿಯಲ್ಲಿ ಬೇಹುಗಾರಿಕೆ ನಡೆಸುತ್ತಿದ್ದ ಪಾಕಿಸ್ತಾನಿ ರೇಂಜರ್ಸ್ ಯೋಧನನ್ನು ಭಾರತದ ಗಡಿ ಭದ್ರತಾ ಪಡೆ ಶನಿವಾರ ವಶಕ್ಕೆ ಪಡೆದುಕೊಂಡಿದೆ . ರಾಜಸ್ಥಾನದ ಶ್ರೀ ಗಂಗಾನಗರದಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಪಾಕಿಸ್ತಾನಿ ರೇಂಜರ್‌ನನ್ನು ಬಂಧಿಸಿದ್ದಾರೆ. ಗಡಿಯೊಳಗೆ ನುಸುಳಲು ಯತ್ನಿಸುತ್ತಿದ್ದಾಗ ಆತನನ್ನು ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತದ ಗಡಿಯಲ್ಲಿ ಬೇಹುಗಾರಿಕೆ ನಡೆಸುತ್ತಿದ್ದಾಗ ಬಹಾವಲ್ಪುರ್ ವಲಯದಿಂದ ಬಿಎಸ್‌ಎಫ್ ಪಾಕಿಸ್ತಾನಿ ರೇಂಜರ್‌ನನ್ನು ಬಂಧಿಸಿದ್ದಾಗಿ ವರದಿಯಾಗಿದೆ.



