ಕರ್ನಾಟಕದ ರಿಯಲ್ ಎಸ್ಟೇಟ್ ಕ್ಷೇತ್ರದ ದಿಗ್ಗಜ ಸಂಸ್ಥೆ, ಮಂಗಳೂರಿನ ಹೆಮ್ಮೆಯ ಸಂಸ್ಥೆ ರೋಹನ್ ಕಾರ್ಪೊರೇಷನ್ ಸಂಸ್ಥೆಯು ತನ್ನ ಬ್ರ್ಯಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನ ಸೂಪರ್ ಸ್ಟಾರ್ ಬಾಲಿವುಡ್ ಬಾದ್‌ಶಾ ಶಾರುಖಾನ್ ಅವರನ್ನು ಘೋಷಿಸಿದೆ. ರೋಹನ್ ಕಾರ್ಪೊರೇಷನ್ ಸಂಸ್ಥೆಯ ರಾಯಭಾರಿಯಾಗಿ ಶಾರುಖಾನ್ ಅವರು ಸಹಿ ಮಾಡುವ ಮೂಲಕ ಹೊಸ ಮೈಲಿಗಲ್ಲಿಗೆ ಸಾಕ್ಷಿಯಾಗಿದೆ.
ಪ್ರತಿ ಬಾರಿಯೂ ಹೊಸತನದ ಮತ್ತು ಆಧುನಿಕತೆಯ ಶೈಲಿಯ ಕಟ್ಟಡದ ನಿರ್ಮಾತೃ ಆಗಿರುವ ರೋಹನ್ ಕಾರ್ಪೋರೇಷನ್ ಇದೀಗ ದೇಶದ ಸೂಪರ್ ಸ್ಟಾರ್ ಶಾರುಖಾನ್ ಅವರನ್ನು ರಾಯಭಾರಿಯನ್ನಾಗಿಸುವ ಮೂಲಕ ವಿಶೇಷತೆಗೆ ಕಾರಣವಾಗಿದೆ. ಮಂಗಳೂರಿನಲ್ಲಿ ಸ್ಥಾಪನೆಯಾದ ಮತ್ತು ಕೇಂದ್ರ ಕಚೇರಿ ಹೊಂದಿರುವ ರೋಹನ್ ಕಾರ್ಪೊರೇಷನ್ ಸಂಸ್ಥೆಯು ವಿಶ್ವಾಸ ಮತ್ತು ತನ್ನ ಅತ್ಯುತ್ತಮ ಸೇವೆಗೆ ಹೆಸರುವಾಸಿಯಾಗಿದೆ.
ಕಳೆದ ಮೂರು ದಶಕಗಳಿಂದ ರೋಹನ್ ಸಿಟಿ ಮತ್ತು ರೋಹನ್ ಸ್ಕ್ವೇರ್ ನಂತಹ ಪ್ರಮುಖ ಡೆವಲಪ್‌ಮೆಂಟ್‌ಗಳೊಂದಿಗೆ, ಮಂಗಳೂರಿನ ಆಕಾಶದೆತ್ತರದ ಆಕರ್ಷಕ ಕಟ್ಟಡಗಳನ್ನು ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಶಾರುಖ್ ಖಾನ್ ಅವರು ರಾಯಭಾರಿಯಾಗಿ ನಮ್ಮ ಸಂಸ್ಥೆಗೆ ಒಪ್ಪಿಗೆ ನೀಡಿರುವುದು ಇದು ಕನಸು ಹಾಗೂ ಬದ್ಧತೆಯ ಸಮ್ಮಿಲನವಾಗಿದೆ. ಶಾರುಖ್ ಖಾನ್ ಅವರು ನಮ್ಮ ಜೊತೆ ಕೈಜೋಡಿಸಿರುವುದ್ದರಿಂದ ಕರ್ನಾಟಕ ಹಾಗೂ ದೇಶಾದ್ಯಂತ ನಮ್ಮ ಸಂಸ್ಥೆ ವಿಸ್ತರಿಸಲು ನಾವು ಬದ್ದರಾಗಿದ್ದೇವೆ ಎಂದು ರೋಹನ್ ಕಾರ್ಪೋರೇಷನ್ ಚೇರ್ ಮ್ಯಾನ್ ರೋಹನ್ ಮೊಂತೇರೊ ತಿಳಿಸಿದ್ದಾರೆ.
ಶಾರುಖ್‌ಖಾನ್ ಮಾತನಾಡಿ, ಪರಿಶ್ರಮ, ನಾವೀನ್ಯತೆ ಮತ್ತು ಹೃದಯಮುಟ್ಟುವ ಬ್ರ್ಯಾಂಡ್ ಆಗಿರುವ ರೋಹನ್ ಕಾರ್ಪೊರೇಷನ್‌ನೊಂದಿಗೆ ಕೈಜೋಡಿಸುತ್ತಿರುವುದು ನಿಜಕ್ಕೂ ಸಂತೋಷದ ವಿಷಯ. ವಿಶಾಲ ದೃಷ್ಟಿಕೋನದೊಂದಿಗೆ ನಾಳಿನ ನಗರಗಳನ್ನು ರೂಪಿಸುವ ಅದ್ಭುತ ಪ್ರಯಾಣದ ಭಾಗವಾಗಿರಲು ನಾನು ಎದುರು ನೋಡುತ್ತಿದ್ದೇನೆ. ಪ್ರಕೃತಿಯೊಂದಿಗೆ ನಗರ ಜೀವನವನ್ನು ಸಾಮರಸ್ಯಗೊಳಿಸುವ ದೃಢವಾದ ದೃಷ್ಟಿಕೋನದ ಬೇರನ್ನು ಹೊಂದಿರುವ ರೋಹನ್‌ಕಾರ್ಪೊರೇಷನ್ ಪರಿಸರವನ್ನು ಸಂರಕ್ಷಿಸುವುದರೊಂದಿಗೆ ಜೀವನದ ಗುಣಮಟ್ಟವನ್ನು ವಿಸ್ತರಿಸುವ ಉತ್ಸಾಹಭರಿತ ಸಮುದಾಯಗಳನ್ನು ಪೋಷಿಸಲು ಶ್ರಮಿಸುತ್ತಿದೆ ಎಂದು ಹೇಳಿದರು.
ಸಮಗ್ರತೆ, ಅತ್ಯುತ್ತಮತೆ, ನಾವೀನ್ಯತೆ, ಹಾಗೂ ಸುಸ್ಥಿರತೆಯ ಪ್ರಮುಖ ಮೌಲ್ಯಗಳೊಂದಿಗೆ, ಶಾರುಖ್‌ಖಾನ್‌ರೊಂದಿಗೆ ರೋಹನ್ ಕಾರ್ಪೊರೇಷನ್‌ರವರ ಪಾಲುದಾರಿಕೆ ಹೊಸ ಕ್ರಿಯಾತ್ಮಕ ಬೆಳವಣಿಗೆ, ವ್ಯಾಪಕ ತೊಡಗುವಿಕೆ ಮತ್ತು ದೃಢವಾದ ಬ್ರ್ಯಾಂಡ್ ಅಸ್ತಿತ್ವದ ನವಯುಗವನ್ನು ಸಂಕೇತಿಸುತ್ತಿದ್ದು , ಇದು ಕರ್ನಾಟಕದಾದ್ಯಂತ ನಿವಾಸದ ಬಗೆಗಿನ ಕನಸುಗಾರರ ಹೊಸ ತಲೆಮಾರು ಮತ್ತು ಮನೆ ಮಾಲೀಕರಿಗೆ ಸ್ಫೂರ್ತಿಯಾಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…