ಬಂಟ್ವಾಳ: ಮೇ. 1 ರಂದು ಬಜ್ಪೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಸುಹಾಶ್ ಶೆಟ್ಟಿ ಮನೆಗೆ ಮಾಜಿ ಸಚಿವ ಈಶ್ವರಪ್ಪ ಅವರ ಪುತ್ರ ಕಾಂತೇಶ್ ಅವರು ಬೇಟಿ ನೀಡಿ ಕುಟುಂಬಕ್ಕೆ ರೂ.1 ಲಕ್ಷದ ಚೆಕ್ ನೀಡಿದರು.

ಹಾಗೂ ಸುಹಾಸ್ ಶೆಟ್ಟಿ ಅಂತ್ಯಕ್ರಿಯೆ ವೇಳೆ ಆಗಮಿಸಿ ಆಶ್ವಾಸನೆ ನೀಡಿದಂತೆ ರೂ.5 ಲಕ್ಷದ ಚೆಕ್ ನ್ನು ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಅವರು ಆಪ್ತ ಕಾರ್ಯದರ್ಶಿ ಮೂಲಕ ಮನೆಗೆ ತಲುಪಿಸಿದ್ದಾರೆ.
ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹಾಗೂ ಎರಡು ವರ್ಷಗಳ ಹಿಂದೆ ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಅವರು ಬೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.



