ಮೇ 1 ರಂದು ರಾತ್ರಿ ಬಜ್ಪೆ ಸಮೀಪ ಹತ್ಯೆಗೀಡಾದ ಸುಹಾಸ್ ಶೆಟ್ಟಿ ಪ್ರಕರಣದ ಬಗ್ಗೆ ಸರಿಯಾದ ತನಿಖೆನಡೆಯುತ್ತಿಲ್ಲ ಎಂದು ವ್ಯಗ್ರರಾಗಿರುವ ಕರಾವಳಿಯ ಬಿಜೆಪಿ ಶಾಸಕರು ಮತ್ತು ಸಂಸದರು ರಾಜ್ಯಪಾಲರಿಗೆ ದೂರು ನೀಡಲು ಮುಂದಾಗಿದ್ದಾರೆ.
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರನ್ನು ಪದೇ ಪದೇ ರೌಡಿ ಶೀಟರ್ ಎಂದು ಬಿಂಬಿಸುತ್ತಿರುವುದಕ್ಕೆ ಬಿಜೆಪಿ ಆರಂಭದಿಂದಲೂ ಆಕ್ಷೇಪ ವ್ಯಕ್ತಪಡಿಸುತ್ತಿದೆ. ಇದಲ್ಲದೆ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಿದವರೇ ಆರೋಪಿಗಳಾಗಿ ಬಂಧಿತರಾಗಿದ್ದಾರೆ. ಜಿಲ್ಲೆಗೆ ಭೇಟಿ ನೀಡಿದ ಗೃಹ ಸಚಿವರು ಸುಹಾಸ್ ಶೆಟ್ಟಿ ಅವರ ಮನೆಗೆ ಭೇಟಿ ನೀಡಿಲ್ಲ. ಆದರೆ ಮುಸ್ಲಿಂ ಸಂಘಟನೆಗಳ ಜೊತೆ ಸಭೆ ನಡೆಸಿದ್ದಾರೆ. ಸೌಜನ್ಯಕ್ಕಾಗಿಯಾದರೂ ಶಾಸಕರ ಸಭೆ ಕರೆದಿಲ್ಲ, ಅವರನ್ನು ಮಾತನಾಡಿಸಿಯೂ ಇಲ್ಲ ಎಂದು ಬಿಜೆಪಿ ಆರೋಪಿಸುತ್ತಿದೆ. ಈ ಅಸಮಾಧಾನ ಈಗ ಕುದಿಬಿಂದು ತಲುಪಿದ್ದು ಶುಕ್ರವಾರದಂದು ಜಿಲ್ಲೆಯ ಶಾಸಕರು ದೂರರ್ಜಿ ಹಿಡಿದು ರಾಜ್ಯಪಾಲರನ್ನು ಭೇಟಿಯಾಗುವುದಕ್ಕೆ ಮುಹೂರ್ತ ನಿಗದಿ ಮಾಡಿದ್ದಾರೆ.
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…
ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ಸುವರ್ಣ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಹೆರ್ಮುಂಡೆಯಲ್ಲಿ…