ಜನ ಮನದ ನಾಡಿ ಮಿಡಿತ

Advertisement

ಬಿಳಿನೆಲೆ: ಕಾರಿಗೆ ಕಾರು ಢಿಕ್ಕಿ-ಒರ್ವ ಸಾವು…!!

ಕಡಬ: ಸ್ವಿಫ್ಟ್ ಕಾರಿಗೆ ಇನ್ನೋವಾ ಕಾರು ಡಿಕ್ಕಿಯಾದ ಪರಿಣಾಮ ಸ್ವಿಫ್ಟ್ ಕಾರಿನಲ್ಲಿದ್ದ ಒರ್ವ ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಕೈಕಂಬ-ಗೋಪಾಳಿ ಎಂಬಲ್ಲಿ  ಸಂಭವಿಸಿದೆ.


ಬೆಂಗಳೂರು ರಾಮನಗರದ ಯಲ್ಲಿಗಯ್ಯ(73) ಮೃತರು. ಯಲ್ಲಿಗಯ್ಯ ಅವರ ಮಗ, ಕಾರನ್ನು ಚಲಾಯಿಸುತ್ತಿದ್ದ ನವೀನ್ (29), ನವೀನ್ ತಾಯಿ ದೈಯಮ್ಮ (52) ಗಾಯಗೊಂಡವರು. ಮೇ ೬ರಂದು ಸಂಜೆ ಗೋಪಾಳಿ ಎಂಬಲ್ಲಿ ಇನ್ನೋವಾ ಕಾರನ್ನು ಅದರ ಚಾಲಕ ಅಜಾಗರೂಕತೆ ಮತ್ತು ನಿರ್ಲಕ್ಷö್ಯದಿಂದ ಚಲಾಯಿಸಿ ಸುಬ್ರಹ್ಮಣ್ಯ ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಸ್ವಿಫ್ಟ್ ಕಾರು ಪಲ್ಟಿಯಾಗಿ ಇನ್ನೋವಾ ಕಾರಿನ ಹಿಂದಿನಿAದ ಹೋಗುತ್ತಿದ್ದ ಕಾರಿಗೆ ಬಂದು ತಾಗಿದೆ.

ಸ್ವಿಫ್ಟ್ ಕಾರಿನಲ್ಲಿದ್ದವರು ಕುಕ್ಕೆ ದೇವಸ್ಥಾನಕ್ಕೆ ಬಂದು ಊರಿಗೆ ಹಿಂದಿರುಗುತ್ತಿದ್ದವರಾಗಿದ್ದು ಕಾರಿನಲ್ಲಿದ್ದ ಚಾಲಕ ಹಾಗೂ ಮತ್ತಿಬ್ಬರನ್ನು ಕೂಡಲೇ ಆಂಬ್ಯುಲೆನ್ಸ್ನಲ್ಲಿ ಕಡಬ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಘಟನೆಯಲ್ಲಿ ತೀವ್ರಗಾಯಗೊಂಡಿದ್ದ ಯಲ್ಲಿಗಯ್ಯ ಅವರು ಚಿಕಿತ್ಸೆ ಫಲಿಸದೆ ರಾತ್ರಿ ಮೃತರಾಗಿದ್ದಾರೆ. ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!