ಕಡಬ: ಸ್ವಿಫ್ಟ್ ಕಾರಿಗೆ ಇನ್ನೋವಾ ಕಾರು ಡಿಕ್ಕಿಯಾದ ಪರಿಣಾಮ ಸ್ವಿಫ್ಟ್ ಕಾರಿನಲ್ಲಿದ್ದ ಒರ್ವ ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಕೈಕಂಬ-ಗೋಪಾಳಿ ಎಂಬಲ್ಲಿ ಸಂಭವಿಸಿದೆ.
ಬೆಂಗಳೂರು ರಾಮನಗರದ ಯಲ್ಲಿಗಯ್ಯ(73) ಮೃತರು. ಯಲ್ಲಿಗಯ್ಯ ಅವರ ಮಗ, ಕಾರನ್ನು ಚಲಾಯಿಸುತ್ತಿದ್ದ ನವೀನ್ (29), ನವೀನ್ ತಾಯಿ ದೈಯಮ್ಮ (52) ಗಾಯಗೊಂಡವರು. ಮೇ ೬ರಂದು ಸಂಜೆ ಗೋಪಾಳಿ ಎಂಬಲ್ಲಿ ಇನ್ನೋವಾ ಕಾರನ್ನು ಅದರ ಚಾಲಕ ಅಜಾಗರೂಕತೆ ಮತ್ತು ನಿರ್ಲಕ್ಷö್ಯದಿಂದ ಚಲಾಯಿಸಿ ಸುಬ್ರಹ್ಮಣ್ಯ ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಸ್ವಿಫ್ಟ್ ಕಾರು ಪಲ್ಟಿಯಾಗಿ ಇನ್ನೋವಾ ಕಾರಿನ ಹಿಂದಿನಿAದ ಹೋಗುತ್ತಿದ್ದ ಕಾರಿಗೆ ಬಂದು ತಾಗಿದೆ.
ಸ್ವಿಫ್ಟ್ ಕಾರಿನಲ್ಲಿದ್ದವರು ಕುಕ್ಕೆ ದೇವಸ್ಥಾನಕ್ಕೆ ಬಂದು ಊರಿಗೆ ಹಿಂದಿರುಗುತ್ತಿದ್ದವರಾಗಿದ್ದು ಕಾರಿನಲ್ಲಿದ್ದ ಚಾಲಕ ಹಾಗೂ ಮತ್ತಿಬ್ಬರನ್ನು ಕೂಡಲೇ ಆಂಬ್ಯುಲೆನ್ಸ್ನಲ್ಲಿ ಕಡಬ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಘಟನೆಯಲ್ಲಿ ತೀವ್ರಗಾಯಗೊಂಡಿದ್ದ ಯಲ್ಲಿಗಯ್ಯ ಅವರು ಚಿಕಿತ್ಸೆ ಫಲಿಸದೆ ರಾತ್ರಿ ಮೃತರಾಗಿದ್ದಾರೆ. ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…