ಜನ ಮನದ ನಾಡಿ ಮಿಡಿತ

Advertisement

ಉತ್ತರಕಾಶಿ : ಹೆಲಿಕಾಪ್ಟರ್ ಅಪಘಾತ; ಐವರು ಭಕ್ತರ ದುರ್ಮರಣ

ಉತ್ತರಾಖಂಡದ ಉತ್ತರಕಾಶಿ ಬಳಿ ಗುರುವಾರ ಬೆಳಿಗ್ಗೆ ಬಳಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ 5 ಮಂದಿ ಪ್ರವಾಸಿಗರು ಮೃತಪಟ್ಟಿದ್ದಾರೆ. ಹೆಲಿಕಾಪ್ಟರ್‌ನಲ್ಲಿ ಸುಮಾರು 7 ಜನ ಇದ್ದರು ಎನ್ನಲಾಗಿದೆ. ಈ ಪೈಕಿ ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಪ್ರವಾಸಿಗರನ್ನು ಒಯ್ಯುತ್ತಿದ್ದ ಹೆಲಿಕಾಪ್ಟರ್ ಡೆಹ್ರಾಡೂನ್‌ನಿಂದ ಹರ್ಸಿಲ್ ಹೆಲಿಪ್ಯಾಡ್‌ಗೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಪೊಲೀಸರು, ಸೇನಾ ಪಡೆ, ವಿಪತ್ತು ನಿರ್ವಹಣಾ ತಂಡ ಮತ್ತು ಆಂಬ್ಯುಲೆನ್ಸ್‌ಗಳು ಉತ್ತರಕಾಶಿ ಬಳಿಯ ಘಟನಾ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಚಾರ್ ಧಾಮ್ ಯಾತ್ರೆ ಆರಂಭಗೊಂಡ ಕೆಲವೇ ದಿನಗಳಲ್ಲಿ ಈ ಅಪಘಾತ ಸಂಭವಿಸಿದೆ.

ಹೆಲಿಕಾಪ್ಟರ್ ಪತನವನ್ನು ಉತ್ತರಕಾಶಿ ಜಿಲ್ಲಾಧಿಕಾರಿ ವಿನಯ್ ಶಂಕರ್ ಪಾಂಡೆ ದೃಢಪಡಿಸಿದ್ದಾರೆ. ಹೆಲಿಕಾಪ್ಟರ್ ಪತನದ ಸ್ಥಳದಲ್ಲಿ ಪರಿಹಾರ ತಂಡಗಳು ಉಪಸ್ಥಿತವಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿವೆ ಎಂದು ಅವರು ತಿಳಿಸಿರುವುದಾಗಿ ಮಾಧ್ಯಮ ಏಂಜೆನ್ಸಿ ತಿಳಿಸಿದೆ.

ಉತ್ತರಕಾಶಿಯ ಗಂಗಾನಿ ಬಳಿ ಹೆಲಿಕಾಪ್ಟರ್ ಅಪಘಾತದಲ್ಲಿ ಐವರು ಸಾವನ್ನಪ್ಪಿರುವುದು ದುಃಖ ತಂದಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ಎಸ್‌ಡಿಆರ್‌ಎಫ್ ಮತ್ತು ಜಿಲ್ಲಾಡಳಿತ ತಂಡಗಳು ತಕ್ಷಣ ಸ್ಥಳಕ್ಕೆ ತಲುಪಿವೆ. ಅಪಘಾತದಲ್ಲಿ ಮಡಿದವರ ಆತ್ಮಕ್ಕೆ ಶಾಂತಿ ದೊರೆಯಲಿ ಮತ್ತು ಮೃತರ ಕುಟುಂಬಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಧಾಮಿ ಪ್ರಾರ್ಥಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!