ಉತ್ತರಾಖಂಡದ ಉತ್ತರಕಾಶಿ ಬಳಿ ಗುರುವಾರ ಬೆಳಿಗ್ಗೆ ಬಳಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ 5 ಮಂದಿ ಪ್ರವಾಸಿಗರು ಮೃತಪಟ್ಟಿದ್ದಾರೆ. ಹೆಲಿಕಾಪ್ಟರ್‌ನಲ್ಲಿ ಸುಮಾರು 7 ಜನ ಇದ್ದರು ಎನ್ನಲಾಗಿದೆ. ಈ ಪೈಕಿ ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಪ್ರವಾಸಿಗರನ್ನು ಒಯ್ಯುತ್ತಿದ್ದ ಹೆಲಿಕಾಪ್ಟರ್ ಡೆಹ್ರಾಡೂನ್‌ನಿಂದ ಹರ್ಸಿಲ್ ಹೆಲಿಪ್ಯಾಡ್‌ಗೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಪೊಲೀಸರು, ಸೇನಾ ಪಡೆ, ವಿಪತ್ತು ನಿರ್ವಹಣಾ ತಂಡ ಮತ್ತು ಆಂಬ್ಯುಲೆನ್ಸ್‌ಗಳು ಉತ್ತರಕಾಶಿ ಬಳಿಯ ಘಟನಾ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಚಾರ್ ಧಾಮ್ ಯಾತ್ರೆ ಆರಂಭಗೊಂಡ ಕೆಲವೇ ದಿನಗಳಲ್ಲಿ ಈ ಅಪಘಾತ ಸಂಭವಿಸಿದೆ.
ಹೆಲಿಕಾಪ್ಟರ್ ಪತನವನ್ನು ಉತ್ತರಕಾಶಿ ಜಿಲ್ಲಾಧಿಕಾರಿ ವಿನಯ್ ಶಂಕರ್ ಪಾಂಡೆ ದೃಢಪಡಿಸಿದ್ದಾರೆ. ಹೆಲಿಕಾಪ್ಟರ್ ಪತನದ ಸ್ಥಳದಲ್ಲಿ ಪರಿಹಾರ ತಂಡಗಳು ಉಪಸ್ಥಿತವಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿವೆ ಎಂದು ಅವರು ತಿಳಿಸಿರುವುದಾಗಿ ಮಾಧ್ಯಮ ಏಂಜೆನ್ಸಿ ತಿಳಿಸಿದೆ.
ಉತ್ತರಕಾಶಿಯ ಗಂಗಾನಿ ಬಳಿ ಹೆಲಿಕಾಪ್ಟರ್ ಅಪಘಾತದಲ್ಲಿ ಐವರು ಸಾವನ್ನಪ್ಪಿರುವುದು ದುಃಖ ತಂದಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ಎಸ್‌ಡಿಆರ್‌ಎಫ್ ಮತ್ತು ಜಿಲ್ಲಾಡಳಿತ ತಂಡಗಳು ತಕ್ಷಣ ಸ್ಥಳಕ್ಕೆ ತಲುಪಿವೆ. ಅಪಘಾತದಲ್ಲಿ ಮಡಿದವರ ಆತ್ಮಕ್ಕೆ ಶಾಂತಿ ದೊರೆಯಲಿ ಮತ್ತು ಮೃತರ ಕುಟುಂಬಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಧಾಮಿ ಪ್ರಾರ್ಥಿಸಿದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್‌ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…