ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಯೆನೆಪೋಯದಲ್ಲಿ 7 ವರ್ಷದ ಬಾಲಕಿಗೆ ಯಶಸ್ವಿ ಕ್ಯಾನ್ಸೆರ್ ಶಸ್ತ್ರಚಿಕಿತ್ಸೆ

ದೇರಳಕಟ್ಟೆಯ ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಭಾಗವಾಗಿರುವ ಜುಲೇಖಾ ಯೆನೆಪೋಯ ಇನ್‌ಸ್ಟಿಟ್ಯೂಟ್ ಆಫ್ ಎಂಡೋಕ್ರೈನ್ ಮತ್ತು ಆಂಕೊಲಾಜಿಯಲ್ಲಿ ನಡೆಸಲಾದ ಥೈರಾಯ್ಡ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆಯ ನಂತರ 7 ವರ್ಷದ ಬಾಲಕಿ ಯಶಸ್ವಿಯಾಗಿ ಚೇತರಿಸಿಕೊಂಡಿದ್ದಾರೆ. ಅತ್ಯಾಧುನಿಕ ತಂತ್ರಜ್ಞಾನ ಮತ್ತು ನುರಿತ ವೈದ್ಯರ ತಂಡದ ಸಹಾಯದಿಂದ ಈ ಸುಧಾರಿತ ವಿಧಾನವನ್ನು ನಡೆಸಲಾಗಿದೆ ಎಂದು ಆಂಕೊಲಾಜಿ ವಿಭಾಗದ ಮುಖ್ಯಸ್ಥ ಡಾ. ಜಲಾಲುದ್ದೀನ್ ಅಕ್ಬರ್ ತಿಳಿಸಿದರು.

ದೇರಳಕಟ್ಟೆ ಜುಲೇಖಾ ಯೆನೆಪೋಯ ಇನ್‌ಸ್ಟಿಟ್ಯೂಟ್‌ನಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಲಕಿಯ ಕುತ್ತಿಗೆಯಲ್ಲಿ ಗುಳ್ಳೆಯನ್ನು ಗಮನಿಸಿದ ನಂತರ ಆಕೆಯ ಪೋಷಕರು ಆಸ್ಪತ್ರೆಗೆ ಕರೆತಂದಿದ್ದರು. ಪರೀಕ್ಷೆಗಳು ಇದು ಥೈರಾಯ್ಡ್‌ನ ಪ್ಯಾಪಿಲ್ಲರಿ ಕಾರ್ಸಿನೋಮ ಎಂದು ದೃಢಪಟ್ಟಿದ್ದು, ಅದು ಕುತ್ತಿಗೆಯ ಎರಡೂ ಬದಿಗಳಿಗೆ ಹರಡಿದ್ದು ನಮಗೆ ಕಂಡುಬಂದಿದೆ.

ಅತಿ ಸೂಕ್ಷ್ಮವಾದ ಪ್ರಕರಣವನ್ನು ಎದುರಿಸಿದ ಡಾ. ಎಚ್.ಟಿ. ಅಮರ್ ರಾವ್, ಡಾ. ನೂರ್ ಮೊಹಮ್ಮದ್ ಮತ್ತು ಅಂತಃಸ್ರಾವಶಾಸ್ತ್ರಜ್ಞ ಡಾ. ಪ್ರೀತಿ ಅವರ ತಂಡ ಶಸ್ತ್ರಚಿಕಿತ್ಸೆ ಮಾಡಲು ನಿರ್ಧರಿಸಿತು. ಸುಧಾರಿತ ಆಸ್ಪತ್ರೆ ಉಪಕರಣಗಳನ್ನು ಬಳಸಿಕೊಂಡು ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಯಿತು. ಮಗು ಈಗ 99% ಚೇತರಿಸಿಕೊಂಡಿದೆ. ರೇಡಿಯೊಅಯೋಡಿನ್ ಚಿಕಿತ್ಸೆಯ ಅವಧಿಯ ನಂತರ ಅಂತಿಮ ಮೌಲ್ಯಮಾಪನ ಮಾಡಲಾಗುತ್ತದೆ. ಚಿಕಿತ್ಸೆಯ ನಂತರ, ಹುಡುಗಿ ಸಂಪೂರ್ಣವಾಗಿ ಸಾಮಾನ್ಯ ಜೀವನವನ್ನು ನಡೆಸುವ ನಿರೀಕ್ಷೆಯಿದೆ ಎಂದಾರು.

ಬಳಿಕ ಮಾತನಾಡಿದ ಡಾ. ನೂರ್ ಅಹಮ್ಮದ್ ಥೈರಾಯ್ಡ್ ಕ್ಯಾನ್ಸರ್‌ಗಾಗಿ ಮಕ್ಕಳ ಮೇಲೆ ಶಸ್ತ್ರಚಿಕಿತ್ಸೆ ಮಾಡುವುದು ವಯಸ್ಕರಿಗಿಂತ ಹೆಚ್ಚಿನ ಸವಾಲಾಗಿ ಪರಿಣಮಿಸುತ್ತದೆ. ಶಸ್ತ್ರ ಚಿಕಿತ್ಸೆಯಲ್ಲಿ ಕೊಂಚ ತಪ್ಪಾದರೂ ಮಗುವಿನ ಪೂರ್ತಿ ಜೀವನಕ್ಕೆ ದುಷ್ಪರಿಣಾಮ ಬೀರುವ ಅಪಾಯವಿದೆ. ಹೀಗಾಗಿ ಸುಮಾರು ೯ ಗಂಟೆಗಳ ದೀರ್ಘ ಸಮಯದ ಶಸ್ತ್ರ ಚಿಕಿತ್ಸೆ ಇದಾಗಿತ್ತು ಎಂದರು.

ಆಸ್ಪತ್ರೆಯ ಸೂಪರಿಂಟೆಂಡೆಂಟ್ ಹಬೀಬ್ ರೆಹಮಾನ್ ಮಾತನಾಡಿ, ಬಹು ವಿಭಾಗಗಳು ಮತ್ತು ಶಸ್ತ್ರಚಿಕಿತ್ಸಾ ತಂಡಗಳ ಪರಿಶ್ರಮದ ಮೂಲಕ ಥೈರಾಯ್ಡ್ ಕ್ಯಾನ್ಸರ್‌ನ ಯಶಸ್ವಿ ಚಿಕಿತ್ಸೆ ಸಾಧ್ಯವಾಯಿತು. ಆಸ್ಪತ್ರೆಯ ತಜ್ಞ ಸಿಬ್ಬಂದಿ ಮತ್ತು ಅತ್ಯಾಧುನಿಕ ಸೌಲಭ್ಯಗಳನ್ನು ಸದುಪಯೋಗ ಪಡಿಸಿದ್ದು, ಇದು ಅನೇಕ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ನಿರ್ವಹಿಸಲು ಅವರಿಗೆ ಹೊಸ ಹುರುಪು ಮಾಡಿಕೊಟ್ಟಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಡಾ. ಎಚ್.ಟಿ. ಅಮರ್ ರಾವ್, ಸಹಾಯಕ ವೈದ್ಯಕೀಯ ಸೂಪರಿಂಟೆಂಡೆಂಟ್ ಡಾ. ನಾಗರಾಜ್, ಮಕ್ಕಳ ತಜ್ಞ ಡಾ. ಅನಿತಾ ಪ್ರಭು, ನರ್ಸಿಂಗ್ ಸೂಪರಿಂಟೆಂಡೆಂಟ್ ಸತ್ಯವತಿ ದೇವಿ, ಸಹಾಯಕ ವೈದ್ಯಕೀಯ ನಿರ್ದೇಶಕಿ ಡಾ. ಬೋನಿ ಪಾಲ್ ಮತ್ತು ಮೊಹಮ್ಮದ್ ಸಬಿತ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!