ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ್ ಮೈಂಡ್ ಅಬ್ದುಲ್ ರೌಫ್ ಅಜರ್ ಸಾವನ್ನಪ್ಪಿರುವ ಬಗ್ಗೆ ಭಾರತೀಯ ಗುಪ್ತಚರ ಇಲಾಖೆ ದೃಢಪಡಿಸಿದೆ.

ಬಹವಾಲ್ಪುರದಲ್ಲಿ ನಡೆಸಿದ ಏರ್‌ಸ್ಟ್ಕ್ ವೇಳೆ ಜೈಶ್-ಎ-ಮೊಹಮದ್ ಸಂಘಟನೆಯ ಅಜರ್ ಮಸೂದ್‌ನ ಕುಟುಂಬದ 13 ಮಂದಿ ಸಾವನ್ನಪ್ಪಿದ್ದರು. ಈ ಪೈಕಿ ಅಜರ್ ಮಸೂದ್ ಸಹೋದರ ಅಬ್ದುಲ್ ರೌಫ್ ಕೂಡ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.
ಕಂದಹಾರ್ ವಿಮಾನ ಹೈಜಾಕ್ ಮಾತ್ರವಲ್ಲದೆ, ಉರಿ, ಪುಲ್ಮಾಮಾ, ಪಠಾಣ್ ಕೋಟ್ ಭಯೋತ್ಪಾದಕ ದಾಳಿ, 2001ರ ಸಂಸತ್ ದಾಳಿ, ಅಕ್ಷರಧಾಮ ದಾಳಿಯಲ್ಲೂ ರವೂಫ್ ಭಾಗಿಯಾಗಿದ್ದ. ಲಷ್ಕರ್-ಎ-ತೈಬಾ ಭಯೋತ್ಪಾದಕ ಸಂಘಟನೆಯ ಕಮಾಂಡರ್ ಆಗಿದ್ದ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಪಾತ್ರ ವಹಿಸಿದ್ದಕ್ಕಾಗಿ ಭಾರತಕ್ಕೆ ಅತ್ಯಂತ ಬೇಕಾಗಿರುವ ಭಯೋತ್ಪಾದಕರಲ್ಲಿ ಒಬ್ಬ ಎನಿಸಿಕೊಂಡಿದ್ದ.



