ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ಹೈ ಅಲರ್ಟ್ ಘೋಷಣೆ : ಸರ್ಕಾರಿ ನೌಕರರ ರಜೆ ರದ್ದು ಮಾಡಿ ಆದೇಶ

ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಸರ್ಕಾರಿ ನೌಕರರ ರಜೆಗಳನ್ನು ರದ್ದುಗೊಳಿಸಲಾಗಿದೆ.ಯಾವುದೇ ತುರ್ತು ಸಂದರ್ಭದಲ್ಲಿ ಆರೋಗ್ಯ ಮತ್ತು ವಿಪತ್ತು ನಿರ್ವಹಣಾ ಸಿದ್ಧತೆಗಳನ್ನು ಪರಿಶೀಲಿಸಲು ಅಧಿಕಾರಿಗಳು ಸಭೆ ನಡೆಸಿರುವುದಾಗಿ ವರದಿಯಾಗಿದೆ.

ದೆಹಲಿಯಾದ್ಯಂತ ಭದ್ರತೆ ಕೈಗೊಳ್ಳಲಾಗಿದ್ದು, ರಾತ್ರಿ ವೇಳೆ ಗಸ್ತು ಹೆಚ್ಚಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎಲ್ಲಾ ಇಲಾಖೆಗಳ ಸರ್ಕಾರಿ ನೌಕರರು ಮುಂದಿನ ಆದೇಶದವರೆಗೆ ರಜೆ ತೆಗೆದುಕೊಳ್ಳುವುದನ್ನು ನಿಷೇಧಿಸಿ ದೆಹಲಿ ಸರ್ಕಾರ ಆದೇಶ ಹೊರಡಿಸಿದೆ.
ಎಲ್ಲಾ ವಲಯಗಳ ವಿಶೇಷ ಆಯುಕ್ತರು 15 ಜಿಲ್ಲೆಗಳ ಉಪ ಆಯುಕ್ತರೊಂದಿಗೆ ಸಭೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಎಲ್ಲಾ ಡಿಸಿಪಿಗಳು ತಮ್ಮ ಪ್ರದೇಶಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಸಕ್ರಿಯವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಡಿಸಿಪಿಗಳು ಈಗಾಗಲೇ ಎಸಿಪಿಗಳು ಸೇರಿದಂತೆ ಅಧೀನ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ದೆಹಲಿ ಪೊಲೀಸರು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ಧರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ದೆಹಲಿಯಲ್ಲಿ ಮಾಲ್‌ಗಳು, ಮಾರುಕಟ್ಟೆಗಳು, ಮೆಟ್ರೊ ನಿಲ್ದಾಣಗಳು, ಹೋಟೆಲ್‌ಗಳು, ವಸತಿ ಸಮುಚ್ಚಯ. ವಿಮಾನ ನಿಲ್ದಾಣಗಳು ಸೇರಿದಂತೆ ಜನದಟ್ಟಣೆ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಹಲವಡೆ ತಪಾಸಣೆ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ದೆಹಲಿ ನಗರ ಸೇರಿದಂತೆ ಗಡಿ ಪ್ರದೇಶಗಳಲ್ಲಿ ಪೊಲೀಸ್ ತಪಾಸಣೆ ಹೆಚ್ಚಿಸಲಾಗಿದ್ದು, ದೆಹಲಿಗೆ ಪ್ರವೇಶಿಸುವ ಎಲ್ಲಾ ವಾಹನಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!