ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಇರುವ ಮಹಿಳಾ ಪೊಲೀಸ್ ಠಾಣೆ ಕಟ್ಟಡವು ಸ್ಥಳಾಂತರವಾಗಲಿದ್ದು ಪುತ್ತೂರು ಬಸ್ ನಿಲ್ದಾಣದ ಬಳಿ ಹೊಸ ಠಾಣೆ ನಿರ್ಮಾಣಕ್ಕೆ ಕಂದಾಯ ಇಲಾಖೆ ಜಾಗ ಮಂಜೂರು ಮಾಡಿದೆ ಎಂದು ಶಾಸಕ ಅಶೋಕ್ ರೈ ಅವರು ತಿಳಿಸಿದ್ದಾರೆ.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿ ಹೊಂದುತ್ತಿದ್ದು ಅಲ್ಲಿದ್ದ ಅನಧಿಕೃತ ಮನೆಗಳನ್ನು ಈಗಾಗಲೇ ತೆರವು ಮಾಡಲಾಗಿದೆ. ಸದ್ಯ ಅಲ್ಲಿ ಮಹಿಳಾ ಪೊಲೀಸ್ ಠಾಣೆ ಕಟ್ಟಡವಿದ್ದು ಅದನ್ನು ತೆರವು ಮಾಡುವುದು ಅಥವಾ ಬೇರೆಡೆ ಸ್ಥಳಾಂತರ ಮಾಡಿಸುವುದಾಗಿ ಈ ಹಿಂದೆ ಶಾಸಕರು ತಿಳಿಸಿದ್ದರು. ಈ ಕಟ್ಟಡ ತೆರವುಗೊಂಡಲ್ಲಿ ದೇವಸ್ಥಾನ ಸುಂದರವಾಗಿ ರೂಪುಗೊಂಡAತಾಗುತ್ತದೆ. ಹೊಸ ಮಹಿಳಾ ಠಾಣೆಗೆ ಬಸ್ ನಿಲ್ದಾಣದ ಬಳಿ ಸ. ನಂ.,124/5ಪಿ2 ರಲ್ಲಿ 8 ಸೆಂಟ್ಸ್ ಜಾಗವನ್ನು ಶಾಸಕರ ಮನವಿ ಮೇರೆಗೆ ಮಂಜೂರು ಮಾಡಿ ಆದೇಶ ಹೊರಡಿಸಿದೆ. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿ ಅಕ್ರಮವಾಗಿದ್ದ ಮನೆಗಳನ್ನು ತೆರವುಗೊಳಿಸಿದ ಬಳಿಕ ದೇವಳಕ್ಕೆ ಅಡ್ಡವಾಗಿದ್ದ ಮಹಿಳಾ ಪೊಲೀಸ್ ಠಾಣಾ ಕಟ್ಟಡವನ್ನು ತೆರವು ಮಾಡಬೇಕಿದೆ ಎಂದು ಅನೇಕ ಭಕ್ತಾದಿಗಳು ಶಾಸಕರಲ್ಲಿ ಮೌಖಿಕ ಮನವಿಯನ್ನು ಮಾಡಿಕೊಂಡಿದ್ದರು. ಈ ಕಟ್ಟಡ ತೆರವು ಮಾಡಿದ್ದೇ ಆದಲ್ಲಿ ದೇವಸ್ಥಾನಕ್ಕೆ ಇನ್ನಷ್ಟು ಜಾಗ ಲಭ್ಯವಾಗಲಿದ್ದು ಮಾತ್ರವಲ್ಲದೆ ದೇವಸ್ಥಾನ ಹಾಗೂ ದೇವಳದ ಪವಿತ್ರ ಕೆರೆಯೂ ಅತಿ ಸುಂದರವಾಗಿ ಕಾಣಿಸಲಿದೆ. ಠಾಣಾ ಕಟ್ಟಡವನ್ನು ತೆರವು ಮಾಡಬೇಕಾದಲ್ಲಿ ಹೊಸ ಠಾಣೆಯನ್ನು ನಿರ್ಮಾಣ ಮಾಡಬೇಕಿತ್ತು. ತಾನೇ ಕಂದಾಯ ಇಲಾಖೆಯ ಅಧಿಕಾರಿಗಳನ್ನು ಕರೆಸಿ ಜಾಗ ಹುಡುಕಿದ ಶಾಸಕರು ಬಸ್ ನಿಲ್ದಾಣದ ಬಳಿಕ 8 ಸೆಂಟ್ಸ್ ಜಾಗವನ್ನು ಪಡೆಯುವಲ್ಲಿ ಸಫಲರಾದರು.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಇದ್ದ ಹಳೆಯ ಪೊಲೀಸ್ ಠಾಣಾ ಕಟ್ಟಡ ಈಗಿನ ಮಹಿಳಾ ಪೊಲೀಸ್ ಠಾಣೆಯನ್ನು ಬಸ್ ನಿಲ್ದಾಣದ ಬಳಿ ನಿರ್ಮಾಣ ಮಾಡಲಾಗುತ್ತದೆ. ಇದಕ್ಕೆ ಕಂದಾಯ ಇಲಾಖೆ ಜಾಗವನ್ನು ಗುರುತಿಸಿ ಆದೇಶವನ್ನು ಹೊರಡಿಸಿದೆ. ಕಟ್ಟಡ ನಿರ್ಮಾಣಕ್ಕೆ ಇನ್ನು ಶೀಘ್ರವೇ ಅನುದಾನವೂ ಬರುತ್ತದೆ.ಹೊಸ ಕಟ್ಟಡ ನಿರ್ಮಾಣವಾದ ಬಳಿಕ ಈಗ ಇರುವ ಠಾಣೆಯನ್ನು ಕೆಡವಲಾಗುತ್ತದೆ, ಇದು ದೇವಳಕ್ಕೆ ಸೇರಿದ ಜಾಗದಲ್ಲಿರುವ ಕಾರಣ ಠಾಣೆಯ ಕಟ್ಟಡವನ್ನು ಕೆಡವಿ ಆ ಜಾಗವನ್ನು ದೇವರಿಗೆ ನೀಡಲಾಗುತ್ತದೆ. ದೇವಸ್ಥಾನದ ಜಾಗವನ್ನು ಯಾರು ಅಕ್ರಮಿಸಿಕೊಂಡರೂ ಅದನ್ನು ಬಿಡುವ ಪ್ರಶ್ನೆಯೇ ಇಲ್ಲ. ದೇವರ ಜಾಗ ದೇವರಿಗೆ ಸೇರಬೇಕು. ಬಸ್ ನಿಲ್ದಾಣದ ಬಳಿ ಆಧುನಿಕ ಶೈಲಿಯ ಹೊಸ ಮಹಿಳಾ ಪೊಲೀಸ್ ಠಾಣೆ ಶೀಘ್ರವೇ ನಿರ್ಮಾಣವಾಗಲಿದೆ. ಪುತ್ತೂರು ಬಸ್ ನಿಲ್ದಾಣದ ಬಳಿ ಮಹಿಳಾ ಪೊಲೀಸ್ ಠಾಣೆ ನಿರ್ಮಾಣವಾಗುತ್ತಿರುವುದು ಸಾರ್ವಜನಿಕರ ಹಿತದೃಷ್ಟಿಯಿಂದ ಅತ್ಯಂತ ಅನುಕೂಲ ಎಂಬ ಮಾತುಗಳು ಕೇಳಿ ಬಂದಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…