ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧದ ಕಾರ್ಮೋಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯವು ದೇಶದ ಎಲ್ಲಾ ಬಂದರುಗಳು, ಟರ್ಮಿನಲ್‌ಗಳು ಮತ್ತು ಹಡಗುಗಳಲ್ಲಿ ಭದ್ರತೆ ಹೆಚ್ಚಿಸಿದೆ ಎಂದು ವರದಿಯಾಗಿದೆ.
ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ವ್ಯವಸ್ಥೆಗಳ ಸುರಕ್ಷತೆಯನ್ನು ಪರಿಶೀಲಿಸಲು ಮತ್ತು ಸೈಬರ್ ದಾಳಿ ಬೆದರಿಕೆಗಳನ್ನು ತಡೆಗಟ್ಟಲು ಅಥವಾ ತಗ್ಗಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಎಲ್ಲಾ ಮುಖ್ಯ ಮಾಹಿತಿ ಭದ್ರತಾ ಅಧಿಕಾರಿಗಳಿಗೆ ಡಿಜಿಸಿಎ ಸೂಚನೆ ನೀಡಿದೆ.
ಭದ್ರತಾ ವ್ಯವಸ್ಥೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ MARSEC ಹಂತ-1 ರಿಂದ MARSEC ಹಂತ-2 ಕ್ಕೆ ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.‘ರಾಷ್ಟ್ರೀಯ ಕಡಲ ಭದ್ರತೆಯ ಹಿತದೃಷ್ಟಿಯಿಂದ ಭದ್ರತಾ ನಿರ್ದೇಶನಗಳನ್ನು ಹೊರಡಿಸಲಾಗಿದೆ. ಈ ನಿರ್ದೇಶನಗಳನ್ನು ಅತ್ಯಂತ ತುರ್ತು ಮತ್ತು ಆದ್ಯತೆಯೊಂದಿಗೆ ಪರಿಗಣಿಸಬೇಕು. ಯಾವುದೇ ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಲಾಗುವುದು’ ಎಂದು ಕ್ಯಾಪ್ಟನ್ ನಿತಿನ್ ಮುಖೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…