ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

 ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿ ವಿಚಾರ;  ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರ ಜೊತೆ ಶಾಸಕ ಅಶೋಕ್ ರೈ ಸಭೆ

ಪುತ್ತೂರು: ಇತಿಹಾಸ ಪ್ರಸಿದ್ದ ಮಹಾತೋಭರ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತು ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗೆ ಈಗಾಗಲೇ ಮಾಸ್ಟ‌ರ್ ಪ್ಲಾನ್ ರೂಪಿಸಲಾಗಿದ್ದು ಇದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿಧಾನಸೌಧದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರ ಜೊತೆ ಶಾಸಕ ಅಶೋಕ್ ರೈ ಸಭೆ ನಡೆಸಿದ್ದಾರೆ.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ. ದೇವಸ್ಥಾನದ ಜಾಗದಲ್ಲಿ ಅತಿಕ್ರಮಣ ಮಾಡಿ ನಿರ್ಮಾಣವಾದ ಮನೆಗಳನ್ನು ತೆರವು ಮಾಡಲಾಗಿದೆ ಮತ್ತು ದೇವಳದ ಪಕ್ಕದಲ್ಲಿ ತೋಡಿಗೆ ತಡೆಗೋಡೆ ನಿರ್ಮಾಣ ಕಾಮಗಾರಿ ಆರಂಭವಾಗಿದೆ. ದೇವಸ್ಥಾನಕ್ಕೆ ಇದೀಗ ವಿಶಾಲವಾದ ಜಾಗವಿದ್ದು, ದೇವಳದ ಎದುರು ಭಾಗದಲ್ಲಿರುವ ಮಹಿಳಾ ಪೊಲೀಸ್‌ ಠಾಣೆಯನ್ನು ಬೇರೆಡೆ ಸ್ಥಳಾಂತರಿಸುವ ಬಗ್ಗೆ ಈಗಾಗಲೇ ಕೆಲಸಕಾರ್ಯಗಳು ನಡೆಯುತ್ತಿದ್ದು, ಹೊಸ ಠಾಣೆಯನ್ನು ಬಸ್ ನಿಲ್ದಾಣದ ಸಮೀಪ ನಿರ್ಮಾಣ ಮಾಡಲು ಜಾಗ ಕಾಯ್ದಿರಿಸಲಾಗಿದೆ.

ದೇವಸ್ಥಾನದ ಅಭಿವೃದ್ಧಿಗೆ ಈಗಾಗಲೇ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಮಾಸ್ಟರ್ ಪ್ಲಾನ್ ರೂಪಿಸಲಾಗಿದೆ. ಮಾಸ್ಟರ್ ಪ್ಲಾನ್ ಪ್ರಕಾರ ದೇವಳದ ಅಭಿವೃದ್ಧಿಗೆ 6090 ಲಕ್ಷ ರೂಗಳ ಅವಶ್ಯಕತೆ ಇದೆ. ಈಗಾಗಲೇ ಶಾಸಕರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಮುಜರಾಯಿ ಖಾತೆ ಸಚಿವರ ಜೊತೆ ಮಾತುಕತೆ ನಡೆಸಿದ್ದಾರೆ. ದೇವಸ್ಥಾನದ ಅಭಿವೃದ್ಧಿ ಕಾರ್ಯಕ್ಕೆ ಬೇಕಾದ ಅನುದಾನವನ್ನು ನೀಡುವ ಬಗ್ಗೆ ಈಗಾಗಲೇ ಸರಕಾರ ಭರವಸೆ ನೀಡಿದ್ದು, ಕಾಮಗಾರಿಗೆ ಅನುದಾನ ಮತ್ತು ಮಾಸ್ಟರ್ ಪ್ಲಾನ್ ಬಗ್ಗೆ ಚರ್ಚೆ ನಡೆಸಲು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರ ಜೊತೆ ಶಾಸಕರು ಸುದೀರ್ಘ ಸಭೆಯನ್ನು ನಡೆಸಿದ್ದಾರೆ.

ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಈಗಾಗಲೇ ಮಾಸ್ಟರ್ ಪ್ಲಾನ್ ರೂಪಿಸಲಾಗಿದ್ದು, ಅದರಂತೆ ಕಾಮಗಾರಿ ನಡೆಯಲಿದೆ.

ಮಾಸ್ಟರ್ ಪ್ಲಾನ್ ಪ್ರಕಾರ 6090 ಲಕ್ಷ ರೂ ಅನುದಾನ ಬೇಕಾಗಿದೆ. ಇದರ ಬಗ್ಗೆ ಚರ್ಚೆ ನಡೆಸಲು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಾದ ವೆಂಕಟೇಶ್ ಅವರ ಜೊತೆ ಮಾತುಕತೆ ನಡೆಸಲಾಗಿದೆ. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ದಿ ಮಾಡಿಯೇ ಸಿದ್ದ ಎಂದು ನನ್ನ ಸಂಕಲ್ಪವಾಗಿದೆ. ಇದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳು ಒಂದೊಂದಾಗಿ ಸರಿಹೊಂದುತ್ತಿದೆ. ದೇವಸ್ಥಾನ ಅಭಿವೃದ್ಧಿಯಾದರೆ ಇಲ್ಲಿಗೆ ದೇಶದ ನಾನಾ ರಾಜ್ಯಗಳಿಂದ ಭಕ್ತಾದಿಗಳು ಖಂಡಿತವಾಗಿಯೂ ಬರುವಂತಾಗುತ್ತದೆ ಎಂದು ಶಾಸಕ ಅಶೋಕ್ ರೈ ಹೇಳಿದರು.

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಮತ್ತು ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಯಾದಲ್ಲಿ ಪುತ್ತೂರಿಗೆ ಭಕ್ತಾದಿಗಳ ಮಹಾಪೂರವೇ ಹರಿದುಬರಲಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!