ಪುತ್ತೂರು: ಇತಿಹಾಸ ಪ್ರಸಿದ್ದ ಮಹಾತೋಭರ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತು ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗೆ ಈಗಾಗಲೇ ಮಾಸ್ಟರ್ ಪ್ಲಾನ್ ರೂಪಿಸಲಾಗಿದ್ದು ಇದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿಧಾನಸೌಧದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರ ಜೊತೆ ಶಾಸಕ ಅಶೋಕ್ ರೈ ಸಭೆ ನಡೆಸಿದ್ದಾರೆ.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ. ದೇವಸ್ಥಾನದ ಜಾಗದಲ್ಲಿ ಅತಿಕ್ರಮಣ ಮಾಡಿ ನಿರ್ಮಾಣವಾದ ಮನೆಗಳನ್ನು ತೆರವು ಮಾಡಲಾಗಿದೆ ಮತ್ತು ದೇವಳದ ಪಕ್ಕದಲ್ಲಿ ತೋಡಿಗೆ ತಡೆಗೋಡೆ ನಿರ್ಮಾಣ ಕಾಮಗಾರಿ ಆರಂಭವಾಗಿದೆ. ದೇವಸ್ಥಾನಕ್ಕೆ ಇದೀಗ ವಿಶಾಲವಾದ ಜಾಗವಿದ್ದು, ದೇವಳದ ಎದುರು ಭಾಗದಲ್ಲಿರುವ ಮಹಿಳಾ ಪೊಲೀಸ್ ಠಾಣೆಯನ್ನು ಬೇರೆಡೆ ಸ್ಥಳಾಂತರಿಸುವ ಬಗ್ಗೆ ಈಗಾಗಲೇ ಕೆಲಸಕಾರ್ಯಗಳು ನಡೆಯುತ್ತಿದ್ದು, ಹೊಸ ಠಾಣೆಯನ್ನು ಬಸ್ ನಿಲ್ದಾಣದ ಸಮೀಪ ನಿರ್ಮಾಣ ಮಾಡಲು ಜಾಗ ಕಾಯ್ದಿರಿಸಲಾಗಿದೆ.
ದೇವಸ್ಥಾನದ ಅಭಿವೃದ್ಧಿಗೆ ಈಗಾಗಲೇ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಮಾಸ್ಟರ್ ಪ್ಲಾನ್ ರೂಪಿಸಲಾಗಿದೆ. ಮಾಸ್ಟರ್ ಪ್ಲಾನ್ ಪ್ರಕಾರ ದೇವಳದ ಅಭಿವೃದ್ಧಿಗೆ 6090 ಲಕ್ಷ ರೂಗಳ ಅವಶ್ಯಕತೆ ಇದೆ. ಈಗಾಗಲೇ ಶಾಸಕರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಮುಜರಾಯಿ ಖಾತೆ ಸಚಿವರ ಜೊತೆ ಮಾತುಕತೆ ನಡೆಸಿದ್ದಾರೆ. ದೇವಸ್ಥಾನದ ಅಭಿವೃದ್ಧಿ ಕಾರ್ಯಕ್ಕೆ ಬೇಕಾದ ಅನುದಾನವನ್ನು ನೀಡುವ ಬಗ್ಗೆ ಈಗಾಗಲೇ ಸರಕಾರ ಭರವಸೆ ನೀಡಿದ್ದು, ಕಾಮಗಾರಿಗೆ ಅನುದಾನ ಮತ್ತು ಮಾಸ್ಟರ್ ಪ್ಲಾನ್ ಬಗ್ಗೆ ಚರ್ಚೆ ನಡೆಸಲು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರ ಜೊತೆ ಶಾಸಕರು ಸುದೀರ್ಘ ಸಭೆಯನ್ನು ನಡೆಸಿದ್ದಾರೆ.
ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಈಗಾಗಲೇ ಮಾಸ್ಟರ್ ಪ್ಲಾನ್ ರೂಪಿಸಲಾಗಿದ್ದು, ಅದರಂತೆ ಕಾಮಗಾರಿ ನಡೆಯಲಿದೆ.
ಮಾಸ್ಟರ್ ಪ್ಲಾನ್ ಪ್ರಕಾರ 6090 ಲಕ್ಷ ರೂ ಅನುದಾನ ಬೇಕಾಗಿದೆ. ಇದರ ಬಗ್ಗೆ ಚರ್ಚೆ ನಡೆಸಲು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಾದ ವೆಂಕಟೇಶ್ ಅವರ ಜೊತೆ ಮಾತುಕತೆ ನಡೆಸಲಾಗಿದೆ. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ದಿ ಮಾಡಿಯೇ ಸಿದ್ದ ಎಂದು ನನ್ನ ಸಂಕಲ್ಪವಾಗಿದೆ. ಇದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳು ಒಂದೊಂದಾಗಿ ಸರಿಹೊಂದುತ್ತಿದೆ. ದೇವಸ್ಥಾನ ಅಭಿವೃದ್ಧಿಯಾದರೆ ಇಲ್ಲಿಗೆ ದೇಶದ ನಾನಾ ರಾಜ್ಯಗಳಿಂದ ಭಕ್ತಾದಿಗಳು ಖಂಡಿತವಾಗಿಯೂ ಬರುವಂತಾಗುತ್ತದೆ ಎಂದು ಶಾಸಕ ಅಶೋಕ್ ರೈ ಹೇಳಿದರು.
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಮತ್ತು ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಯಾದಲ್ಲಿ ಪುತ್ತೂರಿಗೆ ಭಕ್ತಾದಿಗಳ ಮಹಾಪೂರವೇ ಹರಿದುಬರಲಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…