ಉಡುಪಿ: ಭಾರತ ಪಾಕ್ ಉದ್ವಿಗ್ನತೆ ಹಿನ್ನೆಲೆಯಲ್ಲಿ ಇಂದು ಶುಕ್ರವಾರ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು.
ದೇಶದಲ್ಲಿ ಶಾಂತಿ ನೆಲೆಸುವಂತೆ ಮುಸಲ್ಮಾನ ಬಾಂಧವರು ದುಆ ನಿರ್ವಹಿಸಿದರು.ಶತ್ರು ರಾಷ್ಟ್ರದ ಯುದ್ಧದಲ್ಲಿ ದೇಶಕ್ಕೆ ಹಿತವಾಗಬೇಕು, ಆದಷ್ಟು ಬೇಗ ದೇಶ ಮತ್ತೆ ಶಾಂತಿಯತ್ತ ಮರಳಬೇಕು ಎಂದು ಶುಕ್ರವಾರದ ಜುಮಾ ನಮಾಜಿನ ಬಳಿಕ ಧರ್ಮಗುರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದರು.
ಬಳಿಕ ಮಾತನಾಡಿದ ಮುಸ್ಲಿಂ ಮುಖಂಡ ಇಕ್ಬಾಲ್ ಮನ್ನಾ ಅವರು, ಪೆಹಲ್ಗಾಂ ದಾಳಿಯ ನಂತರ ನಾವು ಪಾಕಿಗಳಿಗೆ ತಕ್ಕ ಪಾಠ ಕಲಿಸಿದ್ದೇವೆ.ಪಾಕಿಸ್ಥಾನಕ್ಕೆ ಹೊಡೆಯಲು ಭಾರತಕ್ಕೆ ಅರ್ಧ ಗಂಟೆ ಸಾಕು.ಪದೇಪದೇ ಜಗಳಕ್ಕೆ ಬರುವ ಪಾಕ್ ಗೆ ತಕ್ಕ ಶಾಸ್ತಿಯಾಗಲಿದೆ.ಈ ಸಂದರ್ಭದಲ್ಲಿ ನಾವೆಲ್ಲ ದೇವರಲ್ಲಿ ಪ್ರಾರ್ಥನೆ ಮಾಡಿದ್ದೇವೆ.ವಕ್ಫ್ ಇಲಾಖೆಯಿಂದಲೂ ನಮಗೆ ನಿರ್ದೇಶನ ಬಂದಿದೆ.ಅದಕ್ಕೂ ಮುನ್ನವೇ ನಾವು ಪ್ರಾರ್ಥನೆ ಮಾಡಲು ನಿರ್ಧರಿಸಿದ್ದೆವು.ದೇಶಕ್ಕಾಗಿ ದೇಶದ ಜನರ ಒಳಿತಿಗಾಗಿ ಮಸೀದಿಯಲ್ಲಿ ಪ್ರಾರ್ಥನೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…