ಉಡುಪಿ: ಕುರುಡುಂಜೆ ಜಲಜಮ್ಮ ಹೆಗ್ಡೆ ಅವರ ಶತಮಾನೋತ್ಸವ ಸಂಭ್ರಮ ಕಾರ್ಯಕ್ರಮ ಬ್ರಹ್ಮಾವರ ತಾಲೂಕಿನ ಚೇರ್ಕಾಡಿ ಸೂರೆಬೆಟ್ಟು ಮನೆಯ ಪ್ರಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು.
ಶತಮಾನೋತ್ಸವ ಸಂಭ್ರಮದ ಪ್ರಯುಕ್ತ ಖ್ಯಾತ ಭಜನಾ ತಂಡಗಳ ಮಹಾ ಸಮ್ಮಿಲನದಲ್ಲಿ “ಭಕ್ತ ಭಾವಧಾರೆ”, “ಮಹಾಮೃತ್ಯುಂಜಯ ಹೋಮ”, ಶ್ರೀ ಕೋದಂಡರಾಮ ಕೃಪಾಷೋಷಿತ ಹನುಮಗಿರಿ ಮೇಳದವರಿಂದ ” ಗರುಡೋದ್ಭವ ಪುರುಷಮೃಗ” ಯಕ್ಷಗಾನ ಹಾಗೂ ಕಲ್ಕುಡ, ಪಂಜುರ್ಲಿ, ವಡ್ತೆ, ಅಣ್ಣಪ್ಪ ದೈವಗಳ ನೇಮೋತ್ಸವ ವಿಜೃಂಭಣೆಯಿಂದ ನೆರವೇರಿತು.ಈ ಸಂದರ್ಭದಲ್ಲಿ ನೂರು ಸಂವತ್ಸರಗಳನ್ನು ಪೂರೈಸಿದ ಕುರುಡುಂಜೆ ಜಲಜಮ್ಮ ಹೆಗ್ಡೆ ಅವರನ್ನು ಬಾರ್ಕೂರು ಬಂಟರ ಮಹಾ ಸಂಸ್ಥಾನದ ಡಾ. ವಿದ್ಯಾವಾಚಸ್ಪತಿ ವಿಶ್ವ ಸಂತೋಷ ಭಾರತಿ ಶ್ರೀಪಾದರು ಶಾಲು, ಪೇಟ, ಹಾರ, ಸನ್ಮಾನ ಪತ್ರ ಹಾಗೂ ಶತಮಾನದ ಮಾತೆ ಎಂಬ ಬಿರುದಿನೊಂದಿಗೆ ಗೌರವಿಸಿದರು.
ಬಳಿಕ ಮಾತನಾಡಿದ ಸಂತೋಷ್ ಗುರೂಜಿ ಅವರು, ಮರಿಮಕ್ಕಳನ್ನ ನೋಡಿದ ಜಲಜಮ್ಮನವರಿಗೆ ಶತಮಾನದ ಮಾತೆ ಬಿರುದನ್ನು ಕೊಟ್ಟಿದ್ದೇವೆ. ಸಂಸ್ಥಾನದಲ್ಲಿ ನೋವನ್ನು ಮರೆಮಾಚಿಸುವ 50 ಹಿರಿ ಜೀವಗಳು ಇರುವುದಕ್ಕೆ ಯಾರಾದರೂ ಪುಣ್ಯಾತ್ಮರು ಸಂತೋಷಧಾಮವನ್ನು ನಿರ್ಮಾಣ ಮಾಡಿ ಅವರು ಸಂಜೆಯ ಸಮಯವನ್ನು ನಮ್ಮಂತಹ ಸಾಧು ಸಂತರ ಜೊತೆಯಲ್ಲಿ ಕಳೆಯುವಂತೆ ಅವಕಾಶವನ್ನು ಮಾಡಿಕೊಡಬೇಕು ಎನ್ನುವ ಕನಸನ್ನು ನಾವು ಕಂಡಿದ್ದೇವೆ. ಶತಮಾನದ ಮಾತೆ ಎನ್ನುವ ಬಿರುದನ್ನು ನೀಡಿರುವ ಈ ಸುಸಂದರ್ಭದಲ್ಲಿ ವೃದ್ಧಾಶ್ರಮಕ್ಕೆ ನಾಂದಿಯಾಗಿರತಕ್ಕಂತಹ ಒಂದು ಘಟಳಿಗೆಯಾಗಿ ಅವರ ಆಶೀರ್ವಾದ ಅಲ್ಲಿಗೆ ಸಿಗಲಿ ಎನ್ನುವಂತಹ ಆಶಿರ್ವಚನ ನೀಡಿದ್ದಾರೆ. ಇದೇ ವೇಳೆ ಹಿರಿ ಜೀವಗಳಿಗೆ ಸಂತೋಷಧಾಮ ಮಾಡಬೇಕು ಎನ್ನುವ ಸಂಕಲ್ಪ ಆದಷ್ಟು ಬೇಗ ಈಡೇರಲಿ ಎಂದು ಹಾರೈಸಿದ್ದಾರೆ. ಜಲಜಮ್ಮನವರನ್ನು ಅವರ ಮಕ್ಕಳು, ಮೊಮ್ಮಕ್ಕಳನ್ನು ನೋಡಿ ಎಲ್ಲರೂ ಕಲಿಯಬೇಕು. ತುಳು ನಾಡಿನ ಸಮಸ್ತ ದೈವ ದೇವರುಗಳು ಅವರ ಕುಟುಂಬಕ್ಕೆ ರಕ್ಷಣೆ ನೀಡಿ, ಸಂತೋಷವನ್ನು ನೀಡಲಿ ಎಂದು ಆಶೀರ್ವದಿಸಿದರು.ಸಮಾರಂಭದಲ್ಲಿ ನಿವೃತ್ತ ಡಿಜಿಪಿ ಕಮಲ್ ಪಂತ್, ಖ್ಯಾತ ಚಲನಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ಉದ್ಯಮಿ ಎಚ್.ಎಸ್.ಶೆಟ್ಟಿ, ಅಂಕೋಲದ ಪ್ರಖ್ಯಾತ ನ್ಯಾಯವಾದಿ ನಾಗರಾಜ್ ನಾಯಕ್, ಜಲಜಮ್ಮ ಹೆಗ್ಡೆ ಅವರ ಪುತ್ರ ಮಂಜುನಾಥ್ ಹೆಗ್ಡೆ, ಕಿಶೋರ್ ಹೆಗ್ಡೆ, ಪುತ್ರಿ ಸರಸ್ವತಿ ಹೆಗ್ಡೆ ಉಪಸ್ಥಿತರಿದ್ದರು. ರಘುರಾಮ್ ಅವರು ಕಾರ್ಯಕ್ರಮ ನಿರೂಪಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…